ಬೀದರ್: ಹುಮನಾಬಾದ್ ತಾಲ್ಲೂಕಿನ ಅಮಿರಾಬಾದ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿಜ್ಞಾನ ಮೇಳದಲ್ಲಿ ವಿದ್ಯಾರ್ಥಿಗಳು ತಯಾರಿಸಿದ ವಿವಿಧ ಮಾದರಿಗಳು ಗಮನ ಸೆಳೆದವು.
ವಿಜ್ಞಾನಕ್ಕೆ ಸಂಬಂಧಿಸಿದ ಮಾದರಿಗಳ ಬಗ್ಗೆ ವಿದ್ಯಾರ್ಥಿಗಳು ಸರಾಗವಾಗಿ ಮಾಹಿತಿ ನೀಡಿ ಎಲ್ಲರ ಮೆಚ್ಚುಗೆ ಗಳಿಸಿದರು.
ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ವಿಜ್ಞಾನ ಮೇಳ ಸಹಕಾರಿಯಾಗಿದೆ ಎಂದು ಮೇಳವನ್ನು ಉದ್ಘಾಟಿಸಿದ ಡಯಟ್ ಉಪನ್ಯಾಸಕ ಶಿವಶಂಕರ ಸ್ವಾಮಿ ಹೇಳಿದರು.
ಪರಿಸರ ಸಂರಕ್ಷಣೆ ಎಲ್ಲರ ಹೊಣೆಯಾಗಿದೆ. ಪ್ರತಿಯೊಬ್ಬರೂ ಮರ, ಗಿಡಗಳನ್ನು ಬೆಳೆಸಬೇಕು ಎಂದು ತಿಳಿಸಿದರು.

ಇದೇ ವೇಳೆ ಇಕೋ ಕ್ಲಬ್ ಉದ್ಘಾಟಿಸಲಾಯಿತು. ಡಯಟ್ ಉಪನ್ಯಾಸಕ ಶಿವಾಜಿ ಧನೆ, ಗ್ರಾಮ ಪಂಚಾಯಿತಿ ಸದಸ್ಯ ಮಲ್ಲಪ್ಪ ಬೋತಗಿ, ಅಜೀಮ್ ಪ್ರೇಮಜಿ ಫೌಂಡೇಷನ್ ಹಳ್ಳಿಖೇಡ(ಬಿ) ಸಂಯೋಜಕ ರಮೇಶ್, ಸಂಪನ್ಮೂಲ ವ್ಯಕ್ತಿ ರಾಜಕುಮಾರ ಸೋನಿ ಉಪಸ್ಥಿತರಿದ್ದರು. ಅನಿತಾ ಸ್ವಾಗತಿಸಿದರು. ಸುನೀಲ್ ನಿರೂಪಿಸಿದರು. ಚಂಪಕಲಾ ವಂದಿಸಿದರು.