ಬೀದರ್: ಕರ್ನಾಟಕ ಜಾನಪದ ಅಕಾಡೆಮಿ ವತಿಯಿಂದ ಮಾ. 15 ರಂದು ಶನಿವಾರ ಬೆಳಿಗ್ಗೆ 11.30ಕ್ಕೆ ಬೀದರ ನಗರದ ಡಾ.ಚನ್ನಬಸವ ಪಟ್ಟದ್ದೇವರ ರಂಗಮAದಿರದಲ್ಲಿ 2023 ಹಾಗೂ 2024ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿ ಹಾಗೂ ತಜ್ಞ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯರಾದ ವಿಜಯಕುಮಾರ ಸೋನಾರೆ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ ಮೆರವಣಿಗೆ ಕಾರ್ಯಕ್ರಮ ಹಾಗೂ ಸಾಯಂಕಾಲ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ. ಮಧ್ಯಾಹ್ನ 2 ಗಂಟೆಗೆ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ. ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಶಾಸ್ತç ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿ ಈಶ್ವರ ಬಿ. ಖಂಡ್ರೆ ಸಮಾರಂಭ ಉದ್ಘಾಟಿಸುವರು. ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿ ಪ್ರಶಸ್ತಿ ಪ್ರದಾನ ಮಾಡುವರು. ರಾಜ್ಯದ ಪೌರಾಡಳಿತ ಸಚಿವ ರಹಿಮ್ ಖಾನ್ ಅಧ್ಯಕ್ಷತೆ ವಹಿಸುವರು.

ಸಂಸದ ಸಾಗರ ಖಂಡ್ರೆ ಪುಸ್ತಕ ಬಿಡುಗಡೆ ಮಾಡುವರು. ತಾನು ಪ್ರಾಸ್ತಾವಿಕ ಮಾತನಾಡಲಿದ್ದು, ಔರಾದ್ ಶಾಸಕ ಪ್ರಭು ಚವ್ಹಾಣ, ಬಸವಕಲ್ಯಾಣ ಶಾಸಕ ಶರಣು ಸಲಗರ, ಬೀದರ್ ದಕ್ಷಿಣ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ಹುಮನಾಬಾದ್ ಶಾಸಕ ಡಾ.ಸಿದ್ಧಲಿಂಗಪ್ಪ ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಪಾಟೀಲ, ಶಶೀಲ.ಜಿ.ನಮೋಷಿ, ಭೀಮರಾವ ಪಾಟೀಲ, ಡಾ.ಎಂ.ಜಿ ಮುಳೆ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ.ಬಿ.ನಾರಾಯಣರಾವ, ನಗರ ಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿರೀಶ ದಿಲಿಪ ಬದೋಲೆ, ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿ ಪ್ರದಿಪ ಗುಂಟಿ, ಅಕಾಡೆಮಿಯ ಸದಸ್ಯರುಗಳು ಸೇರಿದಂತೆ ಜಿಲ್ಲೆಯ ಇತರೆ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಆದ ಕಾರಣ ಜಿಲ್ಲೆಯ ಎಲ್ಲ ಕನ್ನಡಪರ ಸಂಘಟನೆಗಳು, ದಲಿತಪರ ಸಂಘಟನೆಗಳ ಪ್ರತಿನಿಧಿಗಳು ಮುಖಂಡರುಗಳು, ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ವಿಜಯಕುಮಾರ ಸೋನಾರೆ ಮನವಿ ಮಾಡಿದ್ದಾರೆ.
——————-