ಬೀದರ್ : ಜಗತ್ತಿನಲ್ಲಿಯೇ ಅತೀ ದೊಡ್ಡ ಯೋಜನೆ ನರೇಗಾ ಯೋಜನೆಯಾಗಿದೆ. ಈ ಯೋಜನೆಯ ಮುಖ್ಯ ಉದ್ದೇಶ ಕೌಶಲ್ಯ ರಹಿತರಿಗೆ ಉದ್ಯೋಗ ಒದಗಿಸುವುದು ಮುಖ್ಯ ಉದ್ದೇಶವಾಗಿದೆ ಎಂದು ನರೇಗಾ ಸಹಾಯಕ ನಿರ್ದೇಶಕ ಸುದೇಶ ಕೊಡ್ದೆ ಹೇಳಿದರು.
ಅವರು ನಾಗೋರ ಗ್ರಾಮದಲ್ಲಿ ನರೇಗಾ ರೋಜಗಾರ ದಿವಸದ ಅಂಗವಾಗಿ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣೆ ಶಿಬಿರ ಹಾಗೂ ವಿದ್ಯಾರ್ಥಿಗಳಿಗೆ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.
ನರೇಗಾವು ದುಡಿಯುವ ಕೈಗಳಿಗೆ ಉದ್ಯೋಗ ಒದಗಿಸಿಸುವ ಜೊತೆಗೆ ಮೂಲಭೂತ ಸೌಕರ್ಯದ ಅಭಿವೃದ್ಧಿ, ಅಂತರ್ಜಲ ವೃದ್ಧಿಗೆ ಹಾಗೂ ಪರಿಸರ ರಕ್ಷಣೆ ಸಾಕಷ್ಟು ಕೆಲಸ ಮಾಡುತ್ತಿದೆ. ಈ ಯೋಜನೆಯ ಲಾಭ ಮಹಿಳೆಯರು ಹಾಗೂ ವಿದ್ಯಾರ್ಥಿಳು ಸಾಕಷ್ಟು ಪಡೆಯುತ್ತಿದ್ದಾರೆ ಎಂದರು.

ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಹೆಚ್ಓಡಿ ಡಾ. ಮಠ ಶಿವಲಿಂಗ ಯ್ಯ ಸ್ವಾಮಿ ಮಾತನಾಡಿ, ನಮ್ಮ ವಿದ್ಯಾರ್ಥಿಗಳು ನರೇಗಾ ಯೋಜನೆ ಬಗ್ಗೆ ಪುಸ್ತಕದಲ್ಲಿ ಓದಿದ್ದರೂ ಆದರೆ ಇಂದು ಅವರು ಕಣ್ಣಾರೆ ನರೇಗಾ ಯೋಜನೆ ಕಾಮಗಾರಿಗಳಾದ ಬದು ನಿರ್ಮಾಣ, ಕೃಷಿ ಹೋಂಡ ನಿರ್ಮಾಣ, ಕುರಿ ಸಾಕಾಣಿಕೆ ಕೊಟ್ಟಿಗೆ ನಿರ್ಮಾಣ ಸೇರಿದಂತೆ ವಿವಿಧ ಕಾಮಾಗಾರಿ ವೀಕ್ಷಣೆ ಮಾಡಿದ್ದಾರೆ ಇದು ವಿದ್ಯಾರ್ಥಿಗಳಿಗೆ ಉಪಯೋಗವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಫುಲಮ್ಮ, ಉಪಾಧ್ಯಕ್ಷ ನರಸಪ್ಪ ಬಿ. ಜಾನಕೆ, ದ್ವಿತೀಯ ದರ್ಜೆ ಸಹಾಯಕಿ ರೋಹಿಣಿ, ದ್ವಿತೀಯ ದರ್ಜೆ ಸಹಾಯಕ ಮಹೇಶ್ ಕಾಳೆ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು, ನರೇಗಾ ಕಾರ್ಮಿಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.
—————–