ಬೀದರ್ : (ಮಾರ್ಚ್ ೨೩ ರಂದು) ಮ. ೧೨-೩೦ಕ್ಕೆ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದ ವತಿಯಿಂದ ದ್ವಿತೀಯ ಮಹಾತ್ಮ ಬೊಮ್ಮಗೊಂಡೇಶ್ವರ ಉತ್ಸವ ಜರುಗಲಿದ್ದು, ಈ ಕಾರ್ಯಕ್ರಮವನ್ನು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷ ಎಚ್.ಎಂ.ರೇವಣ್ಣ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿ ಗೊಳಿಸಬೇಕೆಂದು ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದ ಜಿಲ್ಲಾಧ್ಯಕ್ಷ ಸಂತೋಷ ಜೋಳದಾಪಕೆ ತಿಳಿಸಿದರು.
ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಶುಕ್ರವಾದ ಕರೆದ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ದಿವ್ಯ ಸಾನಿಧ್ಯವನ್ನು ದೇವದುರ್ಗದ ಕಾಗಿನೆಲೆ ಕನಕ ಗುರುಪೀಠದ ಶ್ರೀ ಸಿದ್ಧರಾಮನಂದಪುರಿ ಮಹಾಸ್ವಾಮೀಜಿ ವಹಿಸಲಿದ್ದಾರೆ. ಸಮ್ಮುಖವನ್ನು ಭಾಲ್ಕಿಯ ಪೂಜ್ಯ ಗುರುಬಸವ ಪಟ್ಟದ್ದೇವರು, ಸಿದ್ಧಯ್ಯ ಆಧುನಿಕ ಒಡೆಯರು, ಪೂಜ್ಯ ಭಂತೆ ಸಂಘ ರಖ್ಖೀತ್ ಆಣದೂರ, ಮೌಲಾನಾ ಮಹ್ಮದ್ ಕಿರಮಾನಿ, ನೆಲ್ಸನ್ ಸುಮಿತ್ರಾ, ಬಾಬುರಾವ ಮುತ್ಯಾ, ಬಾಲತಪಸ್ವಿ ಗೋಪಾಲ ಮುತ್ಯಾ ವಹಿಸಲಿದ್ದಾರೆ ಎಂದು ತಿಳಿಸಿದರು.

ವಿಶೇಷ ಆಹ್ವಾನಿತರಾಗಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಆಗಮಿಸಲಿದ್ದು, ಚಿತ್ರಕಲಾ ಪ್ರದರ್ಶನವನ್ನು ಪೌರಾಡಳಿತ ಸಚಿವ ರಹಿಂಖಾನ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಸಾಗರ ಖಂಡ್ರೆ, ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ, ಮಾಜಿ ಸಭಾಪತಿಗಳಾದ ರಘುನಾಥ ಮಲ್ಕಾಪುರೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಅಮೃತರಾವ ಚಿಮಕೊಡೆ, ಮುರಳಿಧರ ಎಕಲಾರಕರ್ ಆಗಮಿಸಲಿದ್ದಾರೆ. ಅಧ್ಯಕ್ಷತೆಯನ್ನು ಸಂತೋಷ ಜೋಳದಾಪಕೆ ವಹಿಸಲಿದ್ದಾರೆ. ವಿಶೇಷ ಉಪನ್ಯಾಸವನ್ನು ವಿಜಯನಗರ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಡಾ.ಕೆ.ಎಂ.ಮೈತ್ರಿ ನೀಡಲಿದ್ದಾರೆ. ಅತಿಥಿಗಳಾಗಿ ಜಿಲ್ಲೆಯ ಹಿರಿಯ ಮುಖಂಡರು, ಸಮಾಜ ಸೇವಕರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಆಗಮಿಸಲಿದ್ದಾರೆ ಎಂದು ಹೇಳಿದರು.
ಮಾರ್ಚ್ ೨೩ ರಂದು ಸಾ. ೪ಗಂಟೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಉದ್ಘಾಟನೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ ಚನಶೆಟ್ಟಿ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಸಂತೋಷ ಜೋಳದಾಪಕೆ ವಹಿಸಲಿದ್ದು, ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ, ಡಾ.ಸಂಜೀವಕುಮಾರ ಅತಿವಾಳೆ, ಶಂಭುಲಿAಗ ವಾಲದೊಡ್ಡಿ, ಡಾ. ರಾಜಕುಮಾರ ಹೆಬ್ಬಾಳೆ ಸೇರಿದಂತೆ ವಿವಿಧ ಮುಖಂಡರು ಆಗಮಿಸಲಿದ್ದಾರೆ.

ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜರುಗಲಿದ್ದು, ಅಂದು ಬೆ. ೯ ಗಂಟೆಗೆ ಮಹಾತ್ಮ ಬೊಮ್ಮಗೊಂಡೇಶ್ವರ ಭಾವಚಿತ್ರದ ಮೆರವಣಿಗೆ ಜರುಗಲಿದೆ. ಜಿಲ್ಲೆಯ ಅನೇಕ ಕಲಾತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆ. ಇದೇ ವೇಳೆ ರಾಜ್ಯ ಸರ್ಕಾರಿ ನೌಕರರಿಗೆ ಸನ್ಮಾನ ಜರುಗಲಿದೆ. ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಕೋರಿದರು.
ಕಲ್ಲಪ್ಪ ಬೆನಕನಹಳ್ಳಿ, ತುಕಾರಾಮ ಚಿಮಕೋಡ, ಮಲ್ಲಿಕಾರ್ಜುನ ಮುರ್ಕೆ, ವೈಜಿನಾಥ ಎಂ.ಪಿ., ವಿಜಯಕುಮಾರ್ ಬ್ಯಾಲಳ್ಳೆ, ಸಿದ್ದು ಬಾವಗೆ, ಲಕ್ಷ್ಮಣ ಉಪ್ಪೆ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
—————-