Saturday, May 24, 2025
Homeಔರಾದ್ಔರಾದ (ಬಾ) ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮ : ಶಾಸಕ ಪ್ರಭು ಚವ್ಹಾಣ

ಔರಾದ (ಬಾ) ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮ : ಶಾಸಕ ಪ್ರಭು ಚವ್ಹಾಣ

ಬೀದರ್ : ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಮಾರ್ಚ್ ೨೩ರಂದು ಔರಾದ(ಬಿ) ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಸಂಚರಿಸಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು.
ವಾಡೇನ್‌ಬಾಗ್ ತಾಂಡಾ, ಸೋರಳ್ಳಿ ತಾಂಡಾ, ಘಮಾ ತಾಂಡಾ, ಗುರುನಾಥ ತಾಂಡಾ, ಮಹಾರಾಜ ವಾಡಿ ತಾಂಡಾ, ಲಚಿರಾಮ ತಾಂಡಾ ಸೇರಿದಂತೆ ವಿವಿಧೆಡೆ ಸಂಚರಿಸಿ ರಸ್ತೆ, ಕುಡಿಯುವ ನೀರು, ಚರಂಡಿ, ವಿದ್ಯುತ್ ಸೇರಿದಂತೆ ವಿವಿಧ ಮೂಲಸೌಕರ್ಯಗಳ ಬಗ್ಗೆ ಮಾಹಿತಿ ಪಡೆದರು. ಸಾರ್ವಜನಿಕರು ಒಬ್ಬೊಬ್ಬರಾಗಿ ತಮ್ಮ ಗ್ರಾಮದಲ್ಲಿನ ಸಮಸ್ಯೆಗಳ ಬಗ್ಗೆ ಶಾಸಕರ ಗಮನಕ್ಕೆ ತಂದರು. ಈ ವೇಳೆ ಗ್ರಾಮದ ಎಲ್ಲ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದೆಂದು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಔರಾದ(ಬಿ) ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಪರಮ ಸಂಕಲ್ಪವಾಗಿದೆ. ಈ ದಿಶೆಯಲ್ಲಿ ನಿರಂತರ ಶ್ರಮ ವಹಿಸುತ್ತಿದ್ದೇನೆ. ಗ್ರಾಮ ಸಂಚಾರ ನಡೆಸಿ ಎಲ್ಲ ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸುವ ಜೊತೆಗೆ ಗ್ರಾಮಗಳಲ್ಲಿ ಆಗಬೇಕಾದ ಕೆಲಸ ಕಾರ್ಯಗಳ ಬಗ್ಗೆ ಮಾಹಿತಿ ಪಡೆದು ಯೋಜನೆ ರೂಪಿಸಿ ಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಕೊಳ್ಳುತ್ತಿದ್ದೇನೆ ಎಂದು ಹೇಳಿದರು.

ಅಭಿವೃದ್ಧಿ ಕೆಲಸಗಳಿಗೆ ಸಾರ್ವಜನಿಕರ ಸಹಕಾರವು ಸಾಕಷ್ಟು ಮುಖ್ಯವಾಗಿರುತ್ತದೆ. ತಮ್ಮ ಗ್ರಾಮದಲ್ಲಿ ನಡೆಯುತ್ತಿರುವ ಎಲ್ಲ ಅಭಿವೃದ್ಧಿ ಕೆಲಸಗಳ ಮೇಲೆ ನಿಗಾ ವಹಿಸಬೇಕು. ಕಾಮಗಾರಿ ಗುಣಮಟ್ಟದಿಂದ ಆಗುತ್ತಿದೆಯೇ ಎನ್ನುವ ಬಗ್ಗೆ ತಿಳಿದುಕೊಳ್ಳಬೇಕು. ಕೆಲಸ ಸರಿಯಾಗಿ ಆಗುತ್ತಿಲ್ಲವೆಂದು ಅನ್ನಿಸಿದಲ್ಲಿ ನೇರವಾಗಿ ನನ್ನನ್ನು ಅಥವಾ ಸಂಬAಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು
ಸೋರಳ್ಳಿ ತಾಂಡಾದಲ್ಲಿರುವ ಸರ್ಕಾರಿ ಶಾಲೆಗೆ ಭೇಟಿ ನೀಡಿ ಶಾಲೆಯ ಕುಂದುಕೊರತೆಗಳ ಬಗ್ಗೆ ಗ್ರಾಮಸ್ಥರು ಮತ್ತು ಶಿಕ್ಷಕರಿಂದ ತಿಳಿದುಕೊಂಡರು. ಶಾಲಾ ಆವರಣದಲ್ಲಿ ನೆಡಲಾದ ಸಸಿಗಳನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಎಲ್ಲ ಶಾಲೆಗಳಲ್ಲಿಯೂ ಇದೇ ರೀತಿ ಸಸಿ ನೆಡುವ ಕಾರ್ಯಕ್ರಮವಾಗಬೇಕು ಎಂದು ಹೇಳಿದರು.
ಶಾಲೆಯ ಕಟ್ಟಡ ಚಿಕ್ಕದಾಗಿದ್ದು, ವಿದ್ಯಾರ್ಥಿಗಳಿಗೆ ಸಾಲುತ್ತಿಲ್ಲ. ಹೊಸ ಕಟ್ಟಡ ನಿರ್ಮಿಸಿಕೊಡಬೇಕೆಂದು ಗ್ರಾಮಸ್ಥರು ಶಾಸಕರಿಗೆ ಮನವಿ ಸಲ್ಲಿಸಿದರು. ಮುಂದಿನ ದಿನಗಳಲ್ಲಿ ಹೊಸ ಶಾಲಾ ಕಟ್ಟಡ ನಿರ್ಮಿಸಲು ಕ್ರಮ ವಹಿಸುವುದಾಗಿ ಭರವಸೆ ನೀಡಿದರು. ಶಾಲೆಗೆ ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಗ್ರಾಮ ಪಂಚಾಯಿತಿಯ ಪ್ರತಿನಿಧಿಗಳಿಗೆ ತಿಳಿಸಿದರು. ಸಾರ್ವಜನಿಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಯಲ್ಲಿ ದಾಖಲಿಸಿ ಸರ್ಕಾರದ ಯೋಜನೆಗಳ ಸದುಪಯೋಗ ಪಡೆಯಬೇಕು ಎಂದು ತಿಳಿಸಿದರು.

ಅಭಿವೃದ್ಧಿ ಕೆಲಸಗಳಿಗೆ ಚಾಲನೆ: ವಾಡೇನ್‌ಬಾಗ್ ತಾಂಡಾ, ಸೋರಳ್ಳಿ ತಾಂಡಾ, ಘಮಾ ತಾಂಡಾ, ಮಹಾರಾಜವಾಡಿ ತಾಂಡಾ, ಮಹಾರಾಜ ರೂಪ್ಲಾ ತಾಂಡಾಗಳಲ್ಲಿ ೨೨.೫೦ ಲಕ್ಷ ಮೊತ್ತದ ಅಂಗನವಾಡಿ ಕಟ್ಟಡಗಳು ಮತ್ತು ಲಚಿರಾಮ ತಾಂಡಾದಲ್ಲಿ ೫ ಲಕ್ಷದ ಸಮುದಾಯ ಭವನ ಕಾಮಗಾರಿಗೆ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ರಾಮಶೆಟ್ಟಿ ಪನ್ನಾಳೆ, ಶಿವರಾಜ ಅಲ್ಮಾಜೆ, ಖಂಡೋಬಾ ಕಂಗಟೆ, ಪ್ರದೀಪ ಪವಾರ್, ಪ್ರಕಾಶ ಜೀರ್ಗೆ, ರವೀಂದ್ರ ರೆಡ್ಡಿ, ಸಂಜು ಚವ್ಹಾಣ, ಲಕ್ಷö್ಮಣ ರಾಠೋಡ್, ನರಸಿಂಗ್ ಬುದ್ರೆ, ನವನಾಥ ಭಾಲ್ಕೆ, ದೀಪಕ ಸಜ್ಜನಶೆಟ್ಟಿ, ಸುರಾ ನಾಯಕ್, ಬಾಲಾಜಿ ಪಾಟೀಲ, ಸಂದೀಪ ಪಾಟೀಲ, ಅಭಂಗ ತಾಡಮಲ್ಲೆ, ಪ್ರಕಾಶ ಮೇತ್ರೆ, ಶೇಷರಾವ ರಾಠೋಡ್, ಶ್ರೀನಿವಾಸ ಖೂಬಾ, ಗೋಪಿನಾಥ ರಾಠೋಡ್, ವಿಠಲ ಬುದ್ರೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

————
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

Nagem Uddin on Smartwatch Series 3
Md Rana Ahmad on Smartwatch Series 3