ಬೀದರ್: ರಂಜಾನ್ ನಿಮಿತ್ತ ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್ ಅವರ ವತಿಯಿಂದ ನಗರದ ಚೌಬಾರಾ ಸಮೀಪದ ಜಾಮಿಯಾ ಮಸೀದಿಯಲ್ಲಿ ಭಾನುವಾರ ಇಫ್ತಾರ್ ಕೂಟ ಏರ್ಪಡಿಸಲಾಗಿತ್ತು.
ಸರ್ವ ಧರ್ಮೀಯರು ಇಫ್ತಾರ್ ಕೂಟದಲ್ಲಿ ಪಾಲ್ಗೊಂಡು ಭಾವೈಕ್ಯ ಮೆರೆದರು. ಒಟ್ಟಿಗೆ ಕುಳಿತು ಹಣ್ಣು, ಆಹಾರ ಸೇವಿಸಿದರು.
ಸಚಿವ ರಹೀಂಖಾನ್, ಹಜ್ ಸಮಿತಿ ಸದಸ್ಯ ಮನ್ಸೂರ್ ಅಹಮ್ಮದ್ ಖಾದ್ರಿ ಅವರು ರಂಜಾನ್ ಕುರಿತು ಮಾತನಾಡಿದರು.
ಸಂಸದ ಸಾಗರ್ ಖಂಡ್ರೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಉಪಾಧ್ಯಕ್ಷೆ ಹಂಗರಗಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಜಾಸ್ಮಿನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಅಜೀಜ್ ಖಾನ್, ರೂಹಿ ಶಿಕ್ಷಣ ಸಂಸ್ಥೆಗಳ ಸಮೂಹದ ಕಾರ್ಯದರ್ಶಿ ಸಲ್ಮಾನ್, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಮಹಮ್ಮದ್ ಯುಸೂಫ್ ಮತ್ತಿತರರು ಪಾಲ್ಗೊಂಡಿದ್ದರು.
—————-