ಬೀದರ್: ದೈಹಿಕ ಶಿಕ್ಷಣ ಶಿಕ್ಷಕರ ಬಡ್ತಿ ಬೇಡಿಕೆ ಕುರಿತು ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್ ಹೇಳಿದರು.
ನಗರದ ಶಾಲಾ ಶಿಕ್ಷಣ ಇಲಾಖೆಯ ಎಸ್.ಎಸ್.ಎ. ಸಭಾಂಗಣದಲ್ಲಿ ಭಾನುವಾರ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಹಾಗೂ ತಾಲ್ಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ ಮತ್ತು ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ನಗರದ ಶಾಲಾ ಶಿಕ್ಷಣ ಇಲಾಖೆಯ ಎಸ್.ಎಸ್.ಎ. ಸಭಾಂಗಣದಲ್ಲಿ ಭಾನುವಾರ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಹಾಗೂ ತಾಲ್ಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ ಮತ್ತು ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಬಡ್ತಿ ವಿಚಾರ ಸಚಿವ ಸಂಪುಟದಲ್ಲೂ ಪ್ರಸ್ತಾಪಿಸಲಾಗುವುದು. ದೈಹಿಕ ಶಿಕ್ಷಕರಿಗೆ ನ್ಯಾಯ ದೊರಕಿಸಿಕೊಡಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ರಾಜ್ಯ ಸರ್ಕಾರಿ ಸರ್ಕಾರಿ ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸಂಜೀವ್ ಬಿ. ಸೂರ್ಯವಂಶಿ ಮಾತನಾಡಿ, ಸೇವಕ ಆಗಿ ಸರ್ಕಾರಿ ಹುದ್ದೆಗೆ ಸೇರಿದವರು ಅಧಿಕಾರಿ ಆಗಿ ನಿವೃತ್ತಿ ಹೊಂದುತ್ತಿದ್ದಾರೆ. ಆದರೆ, ದೈಹಿಕ ಶಿಕ್ಷಣ ಶಿಕ್ಷಕರು ಯಾವುದೇ ಬಡ್ತಿ ಇಲ್ಲದೆ ನಿವೃತ್ತಿ ಹೊಂದುವಂತಾಗಿದೆ ಎಂದು ಸಚಿವರ ಗಮನ ಸೆಳೆದರು.

2006-07 ರಲ್ಲಿ ರಚಿಸಿದ್ದ ಪ್ರೊ. ಎಲ್.ಆರ್. ವೈದ್ಯನಾಥನ್ ಸಮಿತಿಯು ಸಹ ಶಿಕ್ಷಕರಿಗೆ ಸಿಗುವ ಎಲ್ಲ ಸೌಲಭ್ಯಗಳನ್ನು ದೈಹಿಕ ಶಿಕ್ಷಣ ಶಿಕ್ಷಕರಿಗೂ ನೀಡಬೇಕು ಎಂದು ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಬಳಿಕ ಸರ್ಕಾರ ಅದನ್ನು ಒಪ್ಪಿಕೊಂಡಿತ್ತು. ಗೆಜೆಟ್‍ನಲ್ಲೂ ಪ್ರಕಟಿಸಲಾಗಿತ್ತು. ಆದರೂ, ಈವರೆಗೆ ಸೌಲಭ್ಯ ಕಲ್ಪಿಸಿಲ್ಲ ಎಂದು ಅಳಲು ತೋಡಿಕೊಂಡರು. ವೃಂದ ಮತ್ತು ನೇಮಕಾತಿ ತಿದ್ದುಪಡಿ ಮಾಡಬೇಕು ಎಂದು ಬೇಡಿಕೆ ಮಂಡಿಸಿದರು.
ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಹೆಬೂಬ್ ಪಟೇಲ್, ಬೀದರ್ ತಾಲ್ಲೂಕು ಪಂಚಾಯಿತಿಯ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಝಾಕೀರ್ ಹುಸೇನ್, ಸರ್ಕಾರಿ, ಅರೆ ಸರ್ಕಾರಿ ನೌಕರರ ಸಹಕಾರ ಸಂಘದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಮಾತನಾಡಿದರು.
ಡಯಟ್ ಪಾಚಾರ್ಯ ಎಸ್.ಎಲ್. ಪ್ರಸನ್ನಕುಮಾರ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಲೀಂ ಪಾಶಾ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎಸ್.ಎ. ಮುನಾಫ್, ಸಂಘದ ಉಪಾಧ್ಯಕ್ಷ ಶಾಂತಕುಮಾರ ಜೈದೊಡ್ಡಿ, ರಾಘವೇಂದ್ರ ಕುಲಕರ್ಣಿ, ಪ್ರಶಾಂತ ರಾಗಾ, ವಿಜಯಕುಮಾರ ಪಾಟೀಲ, ದಯಾನಂದ ಮಮದೆ, ಶಂಕರ ಬಾಪೂರೆ, ರಾಜು ಸಾಗರ್, ಶ್ರೀಪತಿ ಮೇತ್ರೆ, ಎ.ಕೆ. ಜೋಶಿ, ಜೋಯಲ್ ಜೈರಾಜ್, ರೋಹಿದಾಸ್ ರಾಠೋಡ್, ಕಾಶಿನಾಥ ಬೋರಾಳೆ, ಸಂಜಯ್ ಬಿರಾದಾರ, ಸುಧಾಕರ್, ಮಾಜಿದ್ ಅಲಿ, ಕ್ಲೆಮೆಂಟ್‍ರಾಜ್, ಗೋಪಾಲ್ ಜಮಾದಾರ್, ಶಬ್ಬೀರ್ ಅಲಿ, ಶಿವಶಂಕರ ಪತಂಗೆ, ಯಶವಂತರಾವ್ ಡೊಂಬಾಳೆ ಮತ್ತಿತರರು ಇದ್ದರು. ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವೆಂಕಟರಾವ್ ಡೊಂಬಾಳೆ ನಿರೂಪಿಸಿದರು.
—————
—————