ಬೀದರ್: ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ವತಿಯಿಂದ ನಗರದ ಪ್ರತಾಪನಗರದ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಮಾ. 28 ರಂದು ಸಂಜೆ 5.30ಕ್ಕೆ ಮಹಿಳಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಹಿಳಾ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಕ್ರೀಡಾಕೂಟದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಗುವುದು. ವಿವಿಧ ಕ್ಷೇತ್ರಗಳ ಸಾಧಕ ಮಹಿಳಾ ಸರ್ಕಾರಿ ನೌಕರರನ್ನು ಸನ್ಮಾನಿಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸೋಮಶೇಖರ ಬಿರಾದಾರ ತಿಳಿಸಿದ್ದಾರೆ.
ನೌಕರರು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
—————–