ಬೀದರ್: ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ವತಿಯಿಂದ ಮಾರ್ಚ್ 29 ರಂದು ಸಂಜೆ 5ಕ್ಕೆ ಇಲ್ಲಿಯ ಗಾಂಧಿಗಂಜ್‍ನ ಬಸವೇಶ್ವರ ದೇವಸ್ಥಾನದಲ್ಲಿ ವಚನ ಮಂಟಪ ಮಾಸಿಕ ಚಿಂತನ-ಮಂಥನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದ್ದೇವರು ಸಾನಿಧ್ಯ, ಹುಲಸೂರಿನ ಶಿವಾನಂದ ಸ್ವಾಮೀಜಿ ನೇತೃತ್ವ, ಬಸವ ಸೇವಾ ಪ್ರತಿಷ್ಠಾನದ ಅಕ್ಕ ಡಾ. ಗಂಗಾಂಬಿಕೆ, ಗೋರ್ಟಾದ ಲಿಂಗಾಯತ ಮಹಾಮಠದ ಪ್ರಭುದೇವ ಸ್ವಾಮೀಜಿ ಸಮ್ಮುಖ ವಹಿಸುವರು.

ಸಂಸದ ಸಾಗರ್ ಖಂಡ್ರೆ ಉದ್ಘಾಟಿಸುವರು. ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಧನ್ನೂರ ಅಧ್ಯಕ್ಷತೆ ವಹಿಸುವರು. ಕೌಠಾದ ಬಸವ ಯೋಗಾಶ್ರಮದ ಸಿದ್ಧರಾಮ ಶರಣರು ಬೆಲ್ದಾಳೆ ‘ವಚನಗಳಲ್ಲಿ ಅನುಭವ ಮಂಟಪದ ಐತಿಹಾಸಿಕತೆ’ ಕುರಿತು ಅನುಭಾವ ಮಂಡಿಸುವರು.
ಜಾಗತಿಕ ಲಿಂಗಾಯತ ಮಹಾಸಭಾ ಕೇಂದ್ರ ಸಮಿತಿಯ ಹಿರಿಯ ಉಪಾಧ್ಯಕ್ಷ ಬಸವರಾಜ ಬುಳ್ಳಾ, ಭಾರತೀಯ ಬಸವ ಬಳಗದ ರಾಜ್ಯ ಅಧ್ಯಕ್ಷ ಬಾಬುವಾಲಿ, ರಾಷ್ಟ್ರೀಯ ಬಸವ ದಳದ ಜಿಲ್ಲಾ ಘಟಕದ ಅಧ್ಯಕ್ಷ ಸೋಮಶೇಖರ ಪಾಟೀಲ ಗಾದಗಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಕಲಾವಿದ ಸಿದ್ದುಸಾಯಿ ನಾನಕೇರಿ ವಚನ ಗಾಯನ ನಡೆಸಿಕೊಡುವರು.
ಮಹಾಸಭಾದ ಮಾಸಿಕ ಸಭೆಯಲ್ಲಿ ಪ್ರತಿ ತಿಂಗಳ ಅಮಾವಾಸ್ಯೆಯಂದು ವಚನ ಮಂಟಪ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿತ್ತು.
ಮಹಾಸಭಾದ ಮಾಸಿಕ ಸಭೆಯಲ್ಲಿ ಪ್ರತಿ ತಿಂಗಳ ಅಮಾವಾಸ್ಯೆಯಂದು ವಚನ ಮಂಟಪ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿತ್ತು.
ಅದರಂತೆ ಪ್ರಥಮ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಆಯೋಜಿಸಲಾಗಿದೆ. ಬಸವಾನುಯಾಯಿಗಳು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಧನ್ನೂರ ಮನವಿ ಮಾಡಿದ್ದಾರೆ.
—————–
—————–