ಬೀದರ್: ಸಿದ್ದಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದ ಜಿಲ್ಲಾ ಘಟಕದ ವತಿಯಿಂದ ನಗರದ ಗುರುದ್ವಾರ ಸಮೀಪದ ಜಿಲ್ಲಾ ಕನ್ನಡ ಭವನದಲ್ಲಿ ಮಂಗಳವಾರ (ಏ.1) ಬೆಳಿಗ್ಗೆ 11ಕ್ಕೆ ಡಾ. ಶಿವಕುಮಾರ ಸ್ವಾಮೀಜಿ ಅವರ 118ನೇ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಬಿಡಿಎ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಉದ್ಘಾಟಿಸುವರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ, ಪಿಡಿಒ ಚಂದ್ರಕಾಂತ ಫುಲೆ, ನಿವೃತ್ತ ಮುಖ್ಯಶಿಕ್ಷಕ ಸಿದ್ದಾರೆಡ್ಡಿ ನಾಗೋರಾ, ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ರಮೇಶ ಪಾಟೀಲ ಪಾಶಾಪುರ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಿವಕುಮಾರ ಪಾಟೀಲ ತೇಗಂಪುರ ಅಧ್ಯಕ್ಷತೆ ವಹಿಸುವರು. ಎನ್.ಜಿ.ಒ. ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷರಾಗಿ ಪುನರಾಯ್ಕೆಯಾದ ಬಾಲಾಜಿ ಬಿರಾದಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ಟಿ.ಎಂ. ಮಚ್ಚೆ ಅವರನ್ನು ಸನ್ಮಾನಿಸಲಾಗುವುದು ಎಂದು ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದೇವೇಂದ್ರ ಕರಂಜೆ ತಿಳಿಸಿದ್ದಾರೆ.
——————