ಬೀದರ್ ವಿಶ್ವವಿದ್ಯಾಲಯದ ಲಾಂಛನ ಸಿದ್ಧಪಡಿಸಿದ ಪ್ರಯುಕ್ತ ಸಾಹಿತಿ ಡಾ. ಬಸವರಾಜ ಬಲ್ಲೂರ ಹಾಗೂ ಡಾ. ಶಿವಗಂಗಾ ರುಮ್ಮಾ ಅವರನ್ನು ಭಾಲ್ಕಿ ತಾಲ್ಲೂಕಿನ ಹಾಲಹಳ್ಳಿ ಸಮೀಪದ ಬೀದರ್ ವಿಶ್ವವಿದ್ಯಾಲಯದಲ್ಲಿ ಶನಿವಾರ ನಡೆದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸನ್ಮಾನಿಸಿದರು. ಪೌರಾಡಳಿತ ಸಚಿವ ರಹೀಂಖಾನ್, ವಿಧಾನ ಪರಿಷತ್ ಸದಸ್ಯ ಎಂ.ಜಿ. ಮುಳೆ, ಬಿಡಿಎ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಕುಲಪತಿ ಪ್ರೊ. ಬಿ.ಎಸ್. ಬಿರಾದಾರ ಮತ್ತಿತರರು ಇದ್ದರು.