ಬೀದರ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಗೆ ಏಪ್ರಿಲ್ 16 ರಂದು ಬೀದರ್‍ಗೆ ಬರಲಿರುವ ಪ್ರಯುಕ್ತ ನಗರದ ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿಯಲ್ಲಿ ಏಪ್ರಿಲ್ 10 ರಂದು ಸಂಜೆ 4.30ಕ್ಕೆ ಪೂರ್ವಭಾವಿ ಸಿದ್ಧತಾ ಸಭೆ ಕರೆಯಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ನೇತೃತ್ವ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.
ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್, ಸಂಸದ ಸಾಗರ್ ಖಂಡ್ರೆ, ಮಾಜಿ ಸಚಿವ ರಾಜಶೇಖರ ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಡಾ. ಚಂದ್ರಶೇಖರ ಪಾಟೀಲ, ಭೀಮರಾವ್ ಪಾಟೀಲ ಉಪಸ್ಥಿತರಿರಲಿದ್ದಾರೆ.
ಪಕ್ಷದ ಮುಖಂಡರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಜಿಲ್ಲಾ, ತಾಲ್ಲೂಕು, ಮುಂಚೂಣಿ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಬೇಕು ಎಂದು ಪಕ್ಷದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ ಕೋರಿದ್ದಾರೆ.