ಬೀದರ್: ಇಲ್ಲಿಯ ಶ್ರೀ ಸ್ವಾಮಿ ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ಗುರುವಾರ ಭಗವಾನ ಮಹಾವೀರ ಜಯಂತಿ ಆಚರಿಸಲಾಯಿತು.
ಕಾಲೇಜು ನಿರ್ದೇಶಕಿ ಕಲ್ಪನಾ ಮಠಪತಿ ಅವರು, ಮಹಾವೀರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡಿ ಗೌರವಿಸಿದರು.
ಮಹಾವೀರರ ಅಹಿಂಸಾ ತತ್ವವನ್ನು ಎಲ್ಲರೂ ಪಾಲಿಸಬೇಕು ಎಂದು ಹೇಳಿದರು.
ಪ್ರಾಚಾರ್ಯೆ ಮಂಗಲಾ ಎನ್.ಎಂ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಇದ್ದರು.