ಬೀದರ್: ನಗರದ ಮೈಲೂರಿನ ಸಿ.ಎಂ.ಸಿ. ಕಾಲೊನಿಯಲ್ಲಿ ವೀರ ಹನುಮಾನ ಹಾಗೂ ವಿಠ್ಠಲ-ರುಕ್ಮಿಣಿ ಮಂದಿರದ ಕಳಸಾರೋಹಣ ಶುಕ್ರವಾರ ಭಕ್ತಿ, ಶ್ರದ್ಧೆಯಿಂದ ನೆರವೇರಿತು.
ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತರು ಹರ್ಷೋಲ್ಲಾದೊಂದಿಗೆ ಪಾಲ್ಗೊಂಡರು.
ಭಾರತ ದೇವರು ಹಾಗೂ ಧರ್ಮದ ಮೇಲೆ ಹೆಚ್ಚು ನಂಬಿಕೆ ಹೊಂದಿದ ರಾಷ್ಟ್ರವಾಗಿದೆ ಎಂದು ಕಳಸಾರೋಹಣ ನಿಮಿತ್ತ ಏರ್ಪಡಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಸಂಸದ ಸಾಗರ್ ಖಂಡ್ರೆ ಹೇಳಿದರು.
ಪ್ರತಿಯೊಬ್ಬರೂ ಸದ್ಗುಣಗಳನ್ನು ಮೈಗೂಡಿಸಿಕೊಳ್ಳಬೇಕು. ಸಮಾಜೋಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.

ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ, ಬೀದರ್ ದಕ್ಷಿಣ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ, ಹಲಬರ್ಗಾದ ರಾಚೋಟೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಹಾವಗಿಲಿಂಗೇಶ್ವರ ಶಿವಾಚಾರ್ಯ, ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಶಿಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಿವಕುಮಾರ ಪಾಟೀಲ ತೇಗಂಪುರ ಮಾತನಾಡಿದರು.
ಹೆಡಗಾಪುರದ ಶಿವಲಿಂಗ ಶಿವಾಚಾರ್ಯ ಸಾನಿಧ್ಯ ವಹಿಸಿದ್ದರು. ತಮಲೂರಿನ ಶಿವಾನಂದ ಸ್ವಾಮೀಜಿ ನೇತೃತ್ವ ವಹಿಸಿದ್ದರು. ಬಿಜೆಪಿ ಮುಖಂಡ ಈಶ್ವರಸಿಂಗ್ ಠಾಕೂರ್, ದೇವಸ್ಥಾನ ಸಮಿತಿಯ ಅಧ್ಯಕ್ಷ ರಾಜಕುಮಾರ ಪಾಟೀಲ ತೇಗಂಪುರ, ಪ್ರಮುಖರಾದ ಶ್ರೀನಿವಾಸ್ ಪಾಟೀಲ, ಧನರಾಜ ಹಂಗರಗಿ, ವಿರೂಪಾಕ್ಷ ಗಾದಗಿ, ಅರುಣಕುಮಾರ ಹೋತಪೇಟ್, ಸಂಗಮೇಶ ಮೋರಗಿ ಮತ್ತಿತರರು ಇದ್ದರು.