ಬೀದರ್: ನಗರದ ಶ್ರೀ ಸ್ವಾಮಿ ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಸಂಭ್ರಮದಿಂದ ಅಕ್ಕ ಮಹಾದೇವಿ ಜಯಂತಿ ಆಚರಿಸಲಾಯಿತು.
ಕಾಲೇಜಿನ ಅಧ್ಯಕ್ಷ ಡಾ. ಚಂದ್ರಕಾಂತ ಪಾಟೀಲ ಅವರು ಅಕ್ಕ ಮಹಾದೇವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಅಕ್ಕ ಮಹಾದೇವಿ ಅವರ ವಚನಗಳಲ್ಲಿ ಜೀವನ ಮೌಲ್ಯ ಅಡಗಿವೆ. ಮಹಿಳೆಯರು ಅವರ ಆದರ್ಶಗಳನ್ನು ಪಾಲಿಸಬೇಕು ಎಂದು ಅವರು ಹೇಳಿದರು.
ಕಾಲೇಜು ನಿರ್ದೇಶಕಿ ಕಲ್ಪನಾ ಮಠಪತಿ, ಪ್ರಾಚಾರ್ಯೆ ಮಂಗಲಾ ಎನ್.ಎಂ., ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಇದ್ದರು.