ಬೀದರ್: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಾಧನೆಗೈದ ತಾಲ್ಲೂಕಿನ ಕಮಠಾಣ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳನ್ನು ನಗರದ ಕರ್ನಾಟಕ ಸಾಹಿತ್ಯ ಸಂಘದಲ್ಲಿ ಶುಕ್ರವಾರ ಕರ್ನಾಟಕ ಪ್ರಜಾಶಕ್ತಿ ಸಮಿತಿ ವತಿಯಿಂದ ನಡೆದ ನಾಲ್ಕನೇ ಸರ್ವ ಧರ್ಮ ಸಮ್ಮೇಳನದಲ್ಲಿ ಸನ್ಮಾನಿಸಲಾಯಿತು.
ಸಂಸದ ಸಾಗರ್ ಖಂಡ್ರೆ ಅವರು ಶಾಲು ಹೊದಿಸಿ ಸ್ಮರಣಿಕೆ ನೀಡಿ ಸತ್ಕರಿಸಿ ಪ್ರೋತ್ಸಾಹಿಸಿದರು.
ಕಮಠಾಣ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಜಿಲ್ಲೆಯ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲೇ ಅತಿ ಹೆಚ್ಚು ಶೇ 77.27 ರಷ್ಟು ಫಲಿತಾಂಶ ಬಂದಿದೆ ಎಂದು ಪ್ರಾಚಾರ್ಯೆ ಪ್ರತಿಭಾ ಡಿ. ತಿಳಿಸಿದರು.
1 ವಿದ್ಯಾರ್ಥಿ ಅಗ್ರಶ್ರೇಣಿ, 14 ಪ್ರಥಮ ದರ್ಜೆ ಹಾಗೂ 2 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ರೋಹಿಣಿ ನರಸಪ್ಪ, ದೇವಿಕಾ ಸಂಜೀವಕುಮಾರ, ಭಾಗ್ಯಶ್ರೀ ಸಂಜೀವಕುಮಾರ ಕ್ರಮವಾಗಿ ಕಾಲೇಜಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಗಳಿಸಿದ್ದಾರೆ ಎಂದು ಹೇಳಿದರು.
ಮಠಾಧೀಶರು, ಗಣ್ಯರು, ಸಮಿತಿಯ ಪದಾಧಿಕಾರಿಗಳು ಇದ್ದರು.