ಬೀದರ್: ಇಲ್ಲಿಯ ಶ್ರೀ ಸ್ವಾಮಿ ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.
ಕಾಲೇಜು ಅಧ್ಯಕ್ಷ ಚಂದ್ರಕಾಂತ ಪಾಟೀಲ ಅವರು, ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡಿ ಗೌರವಿಸಿದರು.
ಡಾ. ಬಿ.ಆರ್. ಅಂಬೇಡ್ಕರ್ ಅವರು ಸರ್ವರಿಗೂ ಸಾಮಾಜಿಕ ನ್ಯಾಯ ಕಲ್ಪಿಸಲು ಶ್ರಮಿಸಿದ್ದರು. ಅವರು ರಚಿಸಿದ ಭಾರತದ ಸಂವಿಧಾನ ವಿಶ್ವದಲ್ಲೇ ಶ್ರೇಷ್ಠವಾಗಿದೆ ಎಂದು ಅವರು ಹೇಳಿದರು.
ಪ್ರಾಚಾರ್ಯೆ ಮಂಗಲಾ ಎನ್.ಎಂ, ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಇದ್ದರು.