ಬೀದರ್: ಬಿ.ಎಡ್. ಹಾಗೂ ಇತರ ಪರೀಕ್ಷೆಗಳಲ್ಲಿ ಸಾಧನೆಗೈದ ದತ್ತಗಿರಿ ಬಿ.ಎಡ್. ಕಾಲೇಜು ವಿದ್ಯಾರ್ಥಿ ಮಲ್ಲಿಕಾರ್ಜುನ ಚಂದ್ರಕಾಂತ ಹಂಡೆ ಅವರನ್ನು ನಗರದ ದತ್ತಗಿರಿ ಬಿ.ಎಡ್. ಕಾಲೇಜಿನಲ್ಲಿ ಈಚೆಗೆ ಸನ್ಮಾನಿಸಲಾಯಿತು.
ಪ್ರಾಚಾರ್ಯ ಡಾ. ರಾಮದಾನಿ ಅವರು ಶಾಲು ಹೊದಿಸಿ ಸನ್ಮಾನಿಸಿದರು.

ಮಲ್ಲಿಕಾರ್ಜುನ ಅವರು ಬಿ.ಎಡ್. ಪರೀಕ್ಷೆಯಲ್ಲಿ ಶೇ 90 ರಷ್ಟು ಅಂಕ ಗಳಿಸಿದ್ದಾರೆ. ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ, ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯಲ್ಲಿ ಮೊದಲ ಯತ್ನದಲ್ಲೇ ತೇರ್ಗಡೆಯಾಗಿದ್ದಾರೆ. ಯುಜಿಸಿ ನೆಟ್‍ನಲ್ಲೂ ಉತ್ತೀರ್ಣರಾಗಿದ್ದಾರೆ. ಮೂಲತಃ ಔರಾದ್ ತಾಲ್ಲೂಕಿನ ನಾಗನಪಲ್ಲಿ ಗ್ರಾಮದವರಾಗಿದ್ದಾರೆ.
ಕಾಲೇಜು ಸಿಬ್ಬಂದಿ ಹಾಜರಿದ್ದರು.