ಬೀದರ್: 2025ನೇ ಸಾಲಿನ ಸಾಂಸ್ಕøತಿಕ ನಾಯಕ ಬಸವಣ್ಣನವರ ಜಯಂತಿ ಉತ್ಸವ ಸಮಿತಿಯ ಅಧ್ಯಕ್ಷರಾಗಿ ಡಾ. ಚನ್ನಬಸವ ಪಟ್ಟದ್ದೇವರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜೈರಾಜ ಖಂಡ್ರೆ ಅವರನ್ನು ಆಯ್ಕೆ ಮಾಡಲಾಗಿದೆ.
ನಗರದ ಗಾಂಧಿಗಂಜ್‍ನ ಬಸವೇಶ್ವರ ದೇವಸ್ಥಾನದಲ್ಲಿ ಹಿರಿಯ ಪತ್ರಕರ್ತ ಶಿವಶರಣಪ್ಪ ವಾಲಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಅವರನ್ನು ಆಯ್ಕೆ ಮಾಡಲಾಯಿತು.
ರಾಷ್ಟ್ರೀಯ ಬಸವ ದಳದ ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ಸಂಜೀವಕುಮಾರ ಪಾಟೀಲ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಡಾ. ರಜನೀಶ್ ವಾಲಿ ಅವರನ್ನು ಕೋಶಾಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಎಲ್ಲರೂ ಜತೆಗೂಡಿ ಪ್ರತಿ ವರ್ಷದಂತೆ ಈ ವರ್ಷವೂ ಬಸವ ಜಯಂತಿಯನ್ನು ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸೋಣ ಎಂದು ಜೈರಾಜ ಖಂಡ್ರೆ ಹೇಳಿದರು.
2024ನೇ ಸಾಲಿನ ಬಸವ ಜಯಂತಿ ಉತ್ಸವ ಸಮಿತಿಯ ಅಧ್ಯಕ್ಷ ಸುರೇಶ ಚನಶೆಟ್ಟಿ ಬಸವ ಜಯಂತಿಯ ಲೆಕ್ಕ ಪತ್ರ ಮಂಡಿಸಿದರು.

ಲಿಂಗಾಯತ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಬಿ.ಜಿ. ಶೆಟಕಾರ್, ಭಾರತೀಯ ಬಸವ ಬಳಗದ ರಾಜ್ಯ ಅಧ್ಯಕ್ಷ ಬಾಬು ವಾಲಿ, ರಾಷ್ಟ್ರೀಯ ಬಸವ ದಳದ ಜಿಲ್ಲಾ ಘಟಕದ ಅಧ್ಯಕ್ಷ ಸೋಮಶೇಖರ ಪಾಟೀಲ ಗಾದಗಿ, ಬಸವ ಕೇಂದ್ರದ ಜಿಲ್ಲಾ ಘಟಕದ ಅಧ್ಯಕ್ಷ ಶರಣಪ್ಪ ಮಿಠಾರೆ, ಜಾಗತಿಕ ಲಿಂಗಾಯತ ಮಹಾಸಭೆಯ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಧನ್ನೂರ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ, ಉದ್ಯಮಿ ದೀಪಕ ವಾಲಿ, ಪತ್ರಕರ್ತ ಸಿದ್ರಾಮಯ್ಯ ಸ್ವಾಮಿ, ಕುಶಾಲರಾವ್ ಪಾಟೀಲ ಖಾಜಾಪುರ, ಬಸವರಾಜ ಭತಮುರ್ಗೆ, ರಾಜಕುಮಾರ ಪಾಟೀಲ ಬಗದಲ್, ರಮೇಶ ಮಠಪತಿ, ವಿಶ್ವನಾಥ ಕಾಜಿ, ಶಿವಕುಮಾರ ಕಟ್ಟೆ, ಬಾಬುರಾವ್ ದಾನಿ, ವಿಜಯಕುಮಾರ ಪಾಟೀಲ ಯರನಳ್ಳಿ, ಡಾ. ವಿಜಯಶ್ರೀ ಬಶೆಟ್ಟಿ, ಭಾರತಿ ವಸ್ತ್ರದ್, ಜಯದೇವಿ ಯದಲಾಪುರೆ, ಡಾ. ದೇವಕಿ ನಾಗೂರೆ, ವಿಜಯಲಕ್ಷ್ಮಿ ಕೌಟಗೆ ಪಾಲ್ಗೊಂಡಿದ್ದರು.
ಬಸವ ಬ್ರಿಗೇಡ್ ಅಧ್ಯಕ್ಷ ಬಸವರಾಜ ಪಾಟೀಲ ಹಾರೂರಗೇರಿ ಸ್ವಾಗತಿಸಿದರು. ರಾಷ್ಟ್ರೀಯ ಬಸವ ದಳದ ಪ್ರಧಾನ ಕಾರ್ಯದರ್ಶಿ ಸುರೇಶ ಸ್ವಾಮಿ ನಿರೂಪಿಸಿದರು. ಬಸವ ಜಯಂತಿ ಉತ್ಸವ ಸಮಿತಿಯ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ವಿರೂಪಾಕ್ಷ ಗಾದಗಿ ವಂದಿಸಿದರು.