ಬೀದರ್: ನಗರದ ಉದಗೀರ್ ರಸ್ತೆಯಲ್ಲಿ ಇರುವ ವಾಲಿ ಕಾಂಪ್ಲೆಕ್ಸ್‍ನಲ್ಲಿ ಬಸವ ಜಯಂತಿ ಉತ್ಸವ ಸಮಿತಿಯ ಕಚೇರಿ ಉದ್ಘಾಟನಾ ಕಾರ್ಯಕ್ರಮ ಏಪ್ರಿಲ್ 18 ರಂದು ಬೆಳಿಗ್ಗೆ 10ಕ್ಕೆ ನಡೆಯಲಿದೆ.
ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದ್ದೇವರು, ಲಿಂಗಾಯತ ಮಹಾ ಮಠದ ಡಾ. ಗಂಗಾಂಬಿಕೆ ಅಕ್ಕ, ಸಮಿತಿಯ ಅಧ್ಯಕ್ಷ ಜೈರಾಜ ಖಂಡ್ರೆ, ಸಮಾಜದ ಮುಖಂಡರು, ಬಸವ ಪರ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಬಸವ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬಸವ ಜಯಂತಿ ಉತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಂಜೀವಕುಮಾರ ಪಾಟೀಲ ಮನವಿ ಮಾಡಿದ್ದಾರೆ.