ಬೀದರ್ : ನಗರದ ಚೌಬಾರ ನಿವಾಸಿ ಸುಚಿವ್ರತ್ ಅವರು ಕೆ.ಸಿ.ಇಟಿ ಗಣಿತ ವಿಷಯದ ಪರೀಕ್ಷೆ ಬರೆಯಲು ಗುಂಪಾ ಸಮೀಪದ ಸಾಯಿ ಸ್ಪೂರ್ತಿ ಕಾಲೇಜು ಪರೀಕ್ಷಾ ಕೇಂದ್ರಕ್ಕೆ ಹೋಗಿದ್ದಾಗ, ಜನಿವಾರ ತೆಗೆದಿಡದ ಹೊರತು ಪರೀಕ್ಷಾ ಕೊಠಡಿಗೆ ಬಿಡುವುದಿಲ್ಲ ಎಂದು ಸಿಬ್ಬಂದಿ ತಡೆ ಒಡ್ಡಿದ್ದು, ಆ ವಿದ್ಯಾರ್ಥಿ ಪರೀಕ್ಷೆ ಬರೆಯದೆ ಮನನೊಂದು ಮನೆಗೆ ತೆರಳಿದ್ದಾನೆ. ಆ ವಿದ್ಯಾರ್ಥಿಯ ಶೈಕ್ಷಣಿಕ ಭವಿಷ್ಯವೇ ನಾಶವಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದ್ದು ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಈ ಕೂಡಲೇ ಘಟನೆಯ ಕುರಿತಂತೆ ಉಪವಿಭಾಗಾಧಿಕಾರಿ ದರ್ಜೆಯ ಅಧಿಕಾರಿಯಿಂದ ತನಿಖೆ ನಡೆಸಿ ನಿಯಮಾನುಸಾರ ಶಿಸ್ತು ಕ್ರಮವಹಿಸಲು ಮತ್ತು 24 ಗಂಟೆಗಳ ಒಳಗಾಗಿ ವರದಿ ಸಲ್ಲಿಸಲು ಅರಣ್ಯ, ಜೀವಿಶಾತ್ರ ಮತ್ತು ಪರಿಸರ ಸಚಿವರು ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾಧಿಕಾರಿಗಳಿಗೆ ಸೂಚಸಿದ್ದಾರೆ.