Saturday, May 24, 2025
Homeಜಿಲ್ಲೆಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಅಲೆಮಾರಿ ಜನರಿಗೆ ತಲುಪಿಸಿ - ಪಲ್ಲವಿ ಜಿ.

ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಅಲೆಮಾರಿ ಜನರಿಗೆ ತಲುಪಿಸಿ – ಪಲ್ಲವಿ ಜಿ.

ಬೀದರ್: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಅಲೆಮಾರಿ ಜನರಿಗೆ ತಲುಪಿಸಬೇಕೆಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಮಗಡದ ಅಲೆಮಾರಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ. ಅವರು ತಿಳಿಸಿದರು.
 ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಜಾರಿಗೊಳಿಸಿರುವ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ಹಾಗೂ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು.

ಬೀದರ ಜಿಲ್ಲೆಯಲ್ಲಿ ಮೂರು ದಿವಸ ಪ್ರವಾಸಕೈಗೊಂಡ ಅವರು ಹುಮನಾಬಾದ, ಬಸವಕಲ್ಯಾಣ, ಭಾಲ್ಕಿ, ಔರಾದ ಮತ್ತು ಬೀದರನ ಅಲೆಮಾರಿ ಸಮುದಾಯದವರು ವಾಸಿಸುವ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿನ ನಿವಾಸಿಗಳೊಂದಿಗೆ ಮಾತನಾಡಿ ಸಮಸ್ಯೆಗಳನ್ನು ತಿಳಿದುಕೊಳ್ಳಲಾಯಿತು. ನಿಗಮ ಅಲೆಮಾರಿ ಜನಾಂಗದ ಅಭಿವೃದ್ಧಿಗೆ ಪೂರಕವಾಗಿದೆ. ಪ್ರತಿ ಜಿಲ್ಲೆಯಲ್ಲೂ ಪ್ರವಾಸ ಮಾಡಿ ಅಲೆಮಾರಿಗಳ ಸ್ಥಿತಿಗತಿ, ಸಮಸ್ಯೆಗಳಲ್ಲಿ ಪರಿಶೀಲಿಸಿ ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಹಿತಿ ನೀಡಲಾಗುತ್ತಿದೆ. ಸಮುದಾಯದ ಮಕ್ಕಳ ವಿದ್ಯಾಭ್ಯಾಸಕ್ಕೆ ಪಾಲಕರು ಆದ್ಯತೆ ನೀಡಬೇಕು. ಅಲೆಮಾರಿಗಳು ಮನೆ, ಸ್ವಯಂ ಉದ್ಯೋಗ, ಒಟ್ಟಾರೆಯಾಗಿ ಜೀವನದಲ್ಲಿ ಭದ್ರತೆ ದೊರೆತು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಪ್ರತಿ ಹಂತದಲ್ಲಿ ಸರ್ಕಾರ ಸವಲತ್ತುಗಳನ್ನು ಒದಗಿಸುತ್ತಿದೆ ಎಂದರು.
ಅಲೆಮಾರಿ ಜನರಿಗೆ ಸ್ವಂತ ನಿವೇಶನಗಳಿಲ್ಲ, ವಸತಿಗಳಿಲ್ಲ, ಪರಿತರ ಚೀಟಿ, ಆಧಾರ ಕಾರ್ಡ, ಜಾತಿ ಪ್ರಮಾಣ ಪತ್ರ ಇರುವುದಿಲ್ಲ ಹಾಗೂ ಅವರು ವಾಸಿಸುವ ಸ್ಥಳಗಳು ಸ್ವಚ್ಛವಾಗಿಲ್ಲ ಮತ್ತು ಶಿಕ್ಷಣದಿಂದ ಬಹಳ ವಂಚಿತರ ಬಗ್ಗೆ ಮಾಹಿತಿ ಕಲೆ ಹಾಕಿ ವರದಿ ನೀಡಲು ಸಂಬAಧಿಸಿದ ಅಧಿಕಾರಿಗಳಿಗೆ ತಿಳಿಸಿದ್ದೆನೆ. ಸರ್ಕಾರ ಅಲೆಮಾರಿ ಜನರ ಅಭಿವೃದ್ಧಿಗಾಗಿ ಹತ್ತಾರು ಯೋಜನೆಗಳನ್ನು ಹಾಕಿಕೊಂಡಿದೆ ಅದು ಅವರಿಗೆ ತಲುಪಿಸುವುದು ಅಧಿಕಾರಿಗಳ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಈ ಸಭೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ನಗಮದ ಅಧ್ಯಕ್ಷೆ ಪಲ್ಲವಿ ಜಿ. ಅವರ ಕಾರ್ಯದರ್ಶಿ ಆನಂದ್, ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಸಿಂಧು ರಘು ಹಚ್.ಎಸ್, ಬೀದರನ ತಹಸೀಲ್ದಾರರಾದ ಟಿ.ಮೆಹತ್, ಡಿ.ವಾಯ್.ಎಸ್.ಪಿ. ಶಿವನಗೊಡ ಪಾಟೀಲ್, ಎಲ್ಲಾ ತಾಲೂಕಿನ ಸಮಾಜ ಕಲ್ಯಾಣ ಅಧಿಕಾರಿಗಳು, ಜಿಲ್ಲಾ ಅಲೆಮಾರಿ ಅನುಷ್ಠಾನ ಸಮಿತಿ ಸದಸ್ಯರುಗಳು, ಅಲೆಮಾರಿ ಸಮುದಾಯದ ಮುಖಂಡರು ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
******

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

Nagem Uddin on Smartwatch Series 3
Md Rana Ahmad on Smartwatch Series 3