ಬೀದರ್: ತಾಲ್ಲೂಕಿನ ಗೋರನಳ್ಳಿ ಹತ್ತಿರದ ಶರಣಬಸವೇಶ್ವರ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ಕಾಲೇಜು ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ್ದಾರೆ.
ಕಾಲೇಜಿನ ಆರು ವಿದ್ಯಾರ್ಥಿಗಳು ಜೆಇಇ ಅಡ್ವಾನ್ಸ್‍ಗೆ ಅರ್ಹತೆ ಗಳಿಸಿದ್ದಾರೆ ಎಂದು ಕಾಲೇಜು ಪ್ರಾಚಾರ್ಯ ಡಾ. ಸತೀಶ ಪ್ರತಾಪುರ ತಿಳಿಸಿದ್ದಾರೆ.
ಜೆಇಇ ಅಡ್ವಾನ್ಸ್‍ಗೆ ಅರ್ಹತೆ ಗಳಿಸಿದ ವಿದ್ಯಾರ್ಥಿಗಳಲ್ಲಿ ವೆಂಕಟೇಶ್ ಮಾರ್ಕಂಡೇಶ್ವರ ಪರ್ಸೆಂಟೈಲ್ 90.24, ಶಿವಪುತ್ರ ಚಂದ್ರಕಾಂತ 88.25, ಶ್ರೀಕಾಂತ ಸಂಜುಗೊಂಡ 80.31, ಅರ್ಚನಾ ವೈಜಿನಾಥ, ನೇತ್ರಾ ಶಂಕರಯ್ಯ ಹಾಗೂ ಪ್ರವೀಣ್ ವೆಂಕಟರಾವ್ ಸೇರಿದ್ದಾರೆ ಎಂದು ಹೇಳಿದ್ದಾರೆ.

ಜೆಇಇ ಮೇನ್ಸ್ ಪರೀಕ್ಷೆಯಲ್ಲಿನ ವಿದ್ಯಾರ್ಥಿಗಳ ಸಾಧನೆಗೆ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಶರಣಬಸವಪ್ಪ ಅಪ್ಪ, ಮಾತೆ ಡಾ. ದಾಕ್ಷಾಯಿಣಿ, ಚಿ. ದೊಡ್ಡಪ್ಪ ಅಪ್ಪ, ಕಾರ್ಯದರ್ಶಿ ಬಸವರಾಜ ದೇಶಮುಖ ಸಂತಸ ವ್ಯಕ್ತಪಡಿಸಿದ್ದಾರೆ.
ಶರಣಬಸವೇಶ್ವರ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ಕಾಲೇಜು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಶಿಕ್ಷಣ ಕೊಡುತ್ತಿದೆ. ಅದರ ಫಲವಾಗಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ತೋರುತ್ತಿದ್ದಾರೆ. ಜೆಇಇ ಮೇನ್ಸ್ ಪರೀಕ್ಷೆಯ ಫಲಿತಾಂಶ ಇದಕ್ಕೆ ನಿದರ್ಶನವಾಗಿದೆ.
ಬಸವರಾಜ ದೇಶಮುಖ
ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ