Saturday, May 24, 2025
Homeಜಿಲ್ಲೆಬೀದರ್ ಜನಿವಾರ ಪ್ರಕರಣ: ಸುಚಿವ್ರತ್‌ಗೆ ಬಿಕೆಐಟಿಯಲ್ಲಿ ಉಚಿತ ಸೀಟ್ - ಸಚಿವ ಈಶ್ವರ ಖಂಡ್ರೆ

ಬೀದರ್ ಜನಿವಾರ ಪ್ರಕರಣ: ಸುಚಿವ್ರತ್‌ಗೆ ಬಿಕೆಐಟಿಯಲ್ಲಿ ಉಚಿತ ಸೀಟ್ – ಸಚಿವ ಈಶ್ವರ ಖಂಡ್ರೆ

ಬೀದರ್ : ಜನಿವಾರ ತೆಗೆಯದ ಕಾರಣಕ್ಕೆ ಕೆಸಿಇಟಿ ಗಣಿತ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿ ಸುಚಿವ್ರತ್‌ಗೆ ಭಾಲ್ಕಿಯ ಭೀಮಣ್ಣ ಖಂಡ್ರೆ ತಾಂತ್ರಿಕ ವಿದ್ಯಾಲಯದಲ್ಲಿ ಉಚಿತ ಪ್ರವೇಶ ನೀಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಭರವಸೆ ನೀಡಿದ್ದಾರೆ.
ಇಂದು ಬೆಳಗ್ಗೆ ಸಚಿವ ರಹೀಂಖಾನ್ ಅವರ ಜೊತೆಯಲ್ಲಿ ಸುಚಿವ್ರತ್ ಕುಲಕರ್ಣಿ ಮನೆಗೆ ಭೇಟಿ ನೀಡಿ ವಿದ್ಯಾರ್ಥಿ ಹಾಗೂ ಕುಟುಂಬದ ಸದಸ್ಯರಿಗೆ ಆತ್ಮಸ್ಥೈರ್ಯ ತುಂಬಿದ ಈಶ್ವರ ಖಂಡ್ರೆ, ಖಾಸಗಿ ಕಾಲೇಜಿನ ಸಿಬ್ಬಂದಿಯಿಂದ ಇಂತಹ ಲೋಪವಾಗಿದ್ದು, ಇದು ನೋವಿನ ಸಂಗತಿ. ಇನ್ನು ಮುಂದೆ ಇಂತಹ ಘಟನೆ ಮರುಕಳಿಸದಂತೆ ಎಚ್ಚರ ವಹಿಸಲು ಸೂಚಿಸಲಾಗಿದೆ. ಇಂತಹ ಒಂದು ಘಟನೆ ನಡೆಯಬಾರದಾಗಿತ್ತು. ಈ ಬಗ್ಗೆ ತಮ್ಮ ಗಮನಕ್ಕೆ ಬಂದ ಕೂಡಲೇ ತನಿಖೆ ನಡೆಸಿ 24 ಗಂಟೆಯೊಳಗೆ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೆ, ವರದಿ ಆಧಾರದ ಮೇಲೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮವೂ ಆಗಿದೆ ಎಂದರು.

ವಿದ್ಯಾರ್ಥಿಯ ಶೈಕ್ಷಣಿಕ ಭವಿಷ್ಯಕ್ಕೆ ತೊಂದರೆ ಆಗಬಾರದು ಎಂಬುದು ಎಲ್ಲರ ಭಾವನೆ, ಹೀಗಾಗಿ ಭಾಲ್ಕಿಯ ತಮ್ಮ ಎಂಜಿನಿಯರಿಂಗ್ ಕಾಲೇಜಿನಲ್ಲಿ ಉಚಿತ ಸೀಟ್ ನೀಡುವುದಾಗಿ ಭರವಸೆ ನೀಡಿದರು. ಸುಚಿವ್ರತ್‌ಗೆ ಪ್ರತ್ಯೇಕವಾಗಿ ಪರೀಕ್ಷೆ ನಡೆಸಲು ಅವಕಾಶವಿದೆಯೇ ಎಂಬ ಸಾಧ್ಯತೆಗಳ ಬಗ್ಗೆ ಪರಿಶೀಲಿಸಲಾಗುತ್ತಿದ್ದು, ಈ ಬಗ್ಗೆ ಉನ್ನತ ಶಿಕ್ಷಣ ಸಚಿವರೊಂದಿಗೆ ಮಾತನಾಡಿರುವುದಾಗಿ ತಿಳಿಸಿದ ಈಶ್ವರ ಖಂಡ್ರೆ ವಿದ್ಯಾರ್ಥಿಗೆ ಕಾಮಡ್ ಕೆ ಪರೀಕ್ಷೆ ಬರೆಯಲೂ ವಿದ್ಯಾರ್ಥಿಗೆ ಅವಕಾಶವಿದೆ. ಆ ಸೀಟು ಲಭಿಸಿದರೂ ನೆರವು ನೀಡಲಾಗುವುದು, ಸರ್ಕಾರ ನೊಂದ ವಿದ್ಯಾರ್ಥಿ ಮತ್ತು ಕುಟಂಬದ ಸದಸ್ಯರೊಂದಿಗಿದೆ ಎಂದು ತಿಳಿಸಿದರು.

ಫೋಟೋ ಕ್ಯಾಪಶನ್

ಬೀದರ್‌ನಲ್ಲಿ ಜನಿವಾರದ ಕಾರಣಕ್ಕೆ ಕೆ-ಸಿಇಟಿ ಗಣಿತ ವಿಷಯ ಪರೀಕ್ಷೆ ಬರೆಯಲಾಗದೆ ಮರಳಿದ ವಿದ್ಯಾರ್ಥಿ ಸುಚಿವ್ರತ್ ಕುಲಕರ್ಣಿ ಮನೆಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಪೌರಾಡಳಿತ ಸಚಿವರಾದ ರಹೀಂ ಖಾನ ಅವರಿಂದು ಭೇಟಿ ನೀಡಿ ಧೈರ್ಯ ತುಂಬಿದರು. ಉನ್ನತ ಶಿಕ್ಷಣಕ್ಕೆ ನೆರವಾಗುವ ಭರವಸೆ ನೀಡಿದರು.
*****

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

Nagem Uddin on Smartwatch Series 3
Md Rana Ahmad on Smartwatch Series 3