ಬೀದರ್ : ಇದೇ ಏಪ್ರಿಲ್.30 ರಂದು ವಿಶ್ವಗುರು ಬಸವ ಜಯಂತಿ ಆಚರಣೆ ಪೂರ್ವಸಿದ್ಧತೆಗಾಗಿ ಏಪ್ರಿಲ್.22 ರಂದು ಬೆಳಿಗ್ಗೆ 10:30 ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ. ಕಾರಣ ಸಮಾಜದ ಮುಖಂಡರುಗಳು ಸಭೆಗೆ ಆಗಮಿಸಿ ತಮ್ಮ ಅಮೂಲ್ಯವಾದ ಸಲಹೆಗಳನ್ನು ನೀಡುವಂತೆ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*****