Saturday, May 24, 2025
Homeಜಿಲ್ಲೆಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸೋಣ - ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸೋಣ – ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ್ : ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಏ.30 ರಂದು ಜಿಲ್ಲೆಯಲ್ಲಿ ಅತ್ಯಂತ ವಿಜೃಂಭಣೆಯಿಂದ ಆಚರಿಸೋಣ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏ.30 ರಂದು ನಡೆಯುವ ಬಸವ ಜಯಂತಿ ಆಚರಣೆ ಕುರಿತು ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಏಪ್ರಿಲ್.30 ರಂದು ಬೆಳಿಗ್ಗೆ 8: 30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಬಸವೇಶ್ವರ ವೃತ್ತದಲ್ಲಿರುವ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮತ್ತು ಪೂಜೆ ಸಲ್ಲಿಸಲಾಗುವುದು. ನಂತರ ಮೆರವಣಿಗೆಗೆ ನಡೆಯಲಿದೆ ಮತ್ತು ಸಂಜೆ ವೇದಿಕೆ ಕಾರ್ಯಕ್ರಮ ನಡೆಯಲಿದೆ ಹಾಗೂ ಡಿಜೆ ಬಳಕೆಗೆ ಸಂಬಂಧಿಸಿದಂತೆ ಪೋಲಿಸ್ ಇಲಾಖೆಯಿಂದ ಅನುಮತಿ ಪಡೆಯಬೇಕು ಅಂದು ಎಲ್ಲಾ ಸರ್ಕಾರಿ ಮತ್ತು ಅರೆ ಸರ್ಕಾರಿ ಕಛೇರಿ, ಶಾಲಾ-ಕಾಲೇಜುಗಳಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಕಡ್ಡಾಯವಾಗಿ ಪೂಜೆ ಸಲ್ಲಿಸಬೇಕೆಂದರು. ಪೋಲಿಸ್ ಇಲಾಖೆ ವತಿಯಿಂದ ಬಂದೋಬಸ್ತ್ ನೀಡಲಾಗುವುದು ಎಂದು ತಿಳಿಸಿದರು.

ಬಸವ ಜಯಂತಿ ಉತ್ಸವ ಸಮಿತಿ ಅಧ್ಯಕ್ಷರಾದ ಜೈರಾಜ್ ಖಂಡ್ರೆ ಅವರು ಮಾತನಾಡಿ, ನಾವು ಬಸವ ಜಯಂತಿಯನ್ನು ಏಪ್ರಿಲ್ 28,29 ಮತ್ತು 30 ರವರೆಗೆ ಆಚರಿಸಲು ನಿರ್ಧಾರ ಕೈಗೊಳ್ಳಲಾಗಿದೆ, ಏ.28 ರಂದು ಬೆಳಿಗ್ಗೆ ಗುಂಪಾದಿಂದ ಪಾಪನಾಶದವರೆಗೆ ಬೈಕ್ ರ‍್ಯಾಲಿ ನಡೆಯಲಿದೆ ಹಾಗೂ ಸಂಜೆ 6 ಗಂಟೆಗೆ ಬಸವ ಜಯಂತಿ ಉತ್ಸವ ಉದ್ಘಾಟನಾ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಚಾಲನೆ ನೀಡಲಿದ್ದಾರೆ. ಏ.29ಕ್ಕೆ ರಂಗಮಂದಿರದಲ್ಲಿ ವಚನ ಸಂಗೀತ ಕಾರ್ಯಕ್ರಮ, ಬಸವಾದಿ ಶರಣರ ವೇಷಭೂಷಣ ಮತ್ತು ನಾಟಕ ಕಾರ್ಯಕ್ರಮಗಳು ನಡೆಯಲಿವೆ ಮತ್ತು ಏ.30 ರಂದು ಸಂಜೆ 6 ಗಂಟೆಗೆ ಬಸವೇಶ್ವರ ವೃತ್ತದಲ್ಲಿ ಜಿಲ್ಲಾಧಿಕಾರಿಗಳು ವಚನ ಬೋಧಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಬೇಕು ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ರಾಮ ಸಿಂಧೆ ಮಾತನಾಡಿ, ಬೀದರ ಜಿಲ್ಲೆಗೆ ಬಾಗಲಕೋಟೆ ಜಿಲ್ಲೆಯಿಂದ ಅನುಭವ ಮಂಟಪ ಬಸವಾದಿ ಶರಣರ ವೈಭವ ಕಾರ್ಯಕ್ರಮದ ರಥಯಾತ್ರೆ ಇದೇ ಏ. 23 ರಂದು ಜಿಲ್ಲೆಗೆ ಬರಲಿದ್ದು, ಏ.24ಕ್ಕೆ ಬೆಳಿಗ್ಗೆ 9:30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ರಥಯಾತ್ರೆಗೆ ಪೂಜೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಈ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ಗಿರೀಶ ಬದೋಲೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಚಂದ್ರಕಾಂತ ಪೂಜಾರಿ, ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಮುಖಂಡರಾದ ಶಿವಶರಣಪ್ಪ ವಾಲಿ, ವೈಜಿನಾಥ ಕಂಠಾಣೆ, ಬಾಬು ವಾಲಿ, ಬಸವರಾಜ ಉಳ್ಳ, ರಾಜೇಂದ್ರ ಗಂದಗೆ, ಸುರೇಶ್ ಸ್ವಾಮಿ, ಸಂಜು ಕುಮಾರ್ ಪಾಟೀಲ್, ವಿಜಯಕುಮಾರ ಪಾಟೀಲ, ಸೋಮಶೇಖರ ಅಮಲಾಪೂರೆ, ಮಾರುತಿ ಬೌದ್ಧೆ, ವಿಜಯಕುಮಾರ ಸೊನಾರೆ ಸೇರಿದಂತೆ ಸಮಾಜದ ವಿವಿಧ ಮುಖಂಡರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

Nagem Uddin on Smartwatch Series 3
Md Rana Ahmad on Smartwatch Series 3