ಬೀದರ್: ಬಸವ ಜಯಂತಿ ಅಂಗವಾಗಿ ನಗರದ ಹಾರೂರಗೇರಿಯ ಬಸವೇಶ್ವರ ದೇವಸ್ಥಾನದಲ್ಲಿ ಏಪ್ರಿಲ್ 28 ರಿಂದ 30 ರ ವರೆಗೆ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹಾರೂರಗೇರಿ ಬಸವ ಸಮಿತಿಯ ಅಧ್ಯಕ್ಷ ಬಸವರಾಜ ಪಾಟೀಲ ಹಾರೂರಗೇರಿ ತಿಳಿಸಿದ್ದಾರೆ.
28 ರಂದು ಸಂಜೆ 7ಕ್ಕೆ ದೇವಸ್ಥಾನದಲ್ಲಿ ಗುರು ಪೂಜೆ, ರಾತ್ರಿ 8ಕ್ಕೆ ಭಾಲ್ಕಿ ಹಿರೇಮಠ ಸಂಸ್ಥಾನದ ಮಕ್ಕಳಿಂದ ಜಗಜ್ಯೋತಿ ನಾಟಕ ಪ್ರದರ್ಶನ ನಡೆಯಲಿದೆ ಎಂದು ಹೇಳಿದ್ದಾರೆ.
ಏಪ್ರಿಲ್ 29 ರಂದು ಮಧ್ಯಾಹ್ನ 1ಕ್ಕೆ ಮಹಾ ಪ್ರಸಾದ ವಿತರಣೆ, ಸಂಜೆ 7ಕ್ಕೆ ವಚನ ಗಾಯನ ಜರುಗಲಿದೆ. ಏಪ್ರಿಲ್ 30 ರಂದು ಬೆಳಿಗ್ಗೆ 7ಕ್ಕೆ ಬಸವೇಶ್ವರ ತೊಟ್ಟಿಲು, ಬೆಳಿಗ್ಗೆ 8ಕ್ಕೆ ಕಾಲೊನಿಯಿಂದ ಬಸವೇಶ್ವರ ವೃತ್ತದ ವರೆಗೆ ಬಸವೇಶ್ವರ ಭಾವಚಿತ್ರ, ಧರ್ಮ ಗ್ರಂಥ ಹಾಗೂ ಪಲ್ಲಕ್ಕಿ ಮೆರವಣಿಗೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಬಸವ ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕೋರಿದ್ದಾರೆ.
ಬಸವ ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕೋರಿದ್ದಾರೆ.