ಜಾನುವಾರುಗಳಿಗೆ ಮಾರಣಾಂತಿಕ ಕಾಯಿಲೆಯಾಗಿರುವ ಕಾಲುಬಾಯಿ ರೋಗದ ನಿಯಂತ್ರಣಕ್ಕಾಗಿ ಇಂದಿನಿಂದ ಒಂದು ತಿಂಗಳ ಕಾಲ ತಾಲ್ಲೂಕಿನಲ್ಲಿ ಲಸಿಕೆ ಅಭಿಯಾನವನ್ನು ಜಾರಿಗೊಳಿಸಲಾಗುತ್ತಿದೆ. ಎಲ್ಲಾ ಜಾನುವಾರುಗಳಿಗೆ ಉಚಿತವಾಗಿ ಲಸಿಕೆ ಹಾಕಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಲಸಿಕಾ ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳಾಗದಂತೆ ಕಟ್ಟೆಚ್ಚರ ವಹಿಸಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವಂತೆ ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿರುತ್ತಾರೆ
ರೈತರಿಗೆ ಆರ್ಥಿಕ ಸಂಕಷ್ಟಗಳನ್ನು ತಂದೊಡ್ಡುವ ಕಾಲುಬಾಯಿ ರೋಗವನ್ನು ನಿಯಂತ್ರಿಸಿ, ನಿರ್ಮೂಲನೆಗೊಳಿಸಲು ರೋಗದ ವಿರುದ್ಧ ಲಸಿಕೆ ಹಾಕಿಸುವುದು ಪರ್ಯಾಯವಾಗಿದೆ. ಈ ರೋಗದ ವಿರುದ್ಧ ಎಲ್ಲಾ ದನ, ಎಮ್ಮೆ ಮತ್ತು ಕರುಗಳಿಗೆ ಉಚಿತವಾಗಿ ಲಸಿಕೆ ಹಾಕಲಾಗುವುದು. ಪ್ರತಿ ಜಾನುವಾರುಗಳಿಗೆ ಪ್ರತ್ಯೇಕ ಸಿರಿಂಜ್ ಮತ್ತು ನೀಡಲ್.ಗಳನ್ನು ಬಳಸಲು ಸಹಾಯಕ ನಿರ್ದೇಶಕರು ಔರಾದ್ ಇವರಿಗೆ ಸೂಚನೆ ನೀಡಲಾಗಿದೆ,
ರೈತರು ಹಾಗೂ ಪಶು ಪಾಲಕರು ತಪ್ಪದೇ ತಮ್ಮ ಜಾನುವಾರುಗಳಿಗೆ ಈ ಲಸಿಕೆಯನ್ನು ಹಾಕಿಸಿ, ರೋಗ ಬರದಂತೆ ಅವುಗಳನ್ನು ಸಂರಕ್ಷಿಸಿಕೊಳ್ಳಬೇಕು. ಶಾಸಕರ ಎಲ್ಲಾ ರೈತರಿಗೆ ಮನವಿ ಮಾಡಿದ್ದಾರೆ
ಈ ಸಂದರ್ಭದಲ್ಲಿ ಪ್ರದೀಪ್ ಪವಾರ್, ಪ್ರತಾಪ್ ಪವಾರ್, ಇಲಾಖೆಯ ಸಹಾಯಕ ಡಾ ಫಾಹಿಮ್ ಖುರೇಷಿ ಸೇರಿದಂತೆ ಇತರರಿದ್ದರು.
———————-