ಬೀದರ್: ಜಹೀರಾಬಾದ್ ತಾಲ್ಲೂಕಿನ ಮಲ್ಲಯ್ಯಗಿರಿ ಹಾಗೂ ಬಸವಕಲ್ಯಾಣ ಆಶ್ರಮದ ಪೀಠಾಧಿಪತಿ ಡಾ. ಬಸವಲಿಂಗ ಅವಧೂತರಿಗೆ ಬೆಂಗಳೂರಿನ ಸುಮಂಗಲಿ ಸೇವಾ ಆಶ್ರಮದಲ್ಲಿ ಬುಧವಾರ ನಡೆದ ಬಸವ ಜಯಂತಿ ಆಚರಣೆ ಸಮಾರಂಭದಲ್ಲಿ ಅಣ್ಣ ಬಸವಣ್ಣ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಅವರಿಗೆ ಪ್ರಶಸ್ತಿ ಸಂದಿದೆ.
ಸುಮಂಗಲಿ ಸೇವಾ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷೆ ಡಾ. ಎಸ್.ಜಿ. ಸುಶೀಲಮ್ಮ, ಬೆಳಗಾವಿಯ ಅಂಥಣಿ ಮೋತಗಿ ಮಠದ ಪೀಠಾಧಿಪತಿ ಚನ್ನಬಸವ ಸ್ವಾಮೀಜಿ, ಕಿರಣ ಕುಡ್ತೆ ಭಾತಂಬ್ರಾ ಮತ್ತಿತರರು ಇದ್ದರು.
——————