ಬೀದರ್: ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಬಾಲಕಿಯರ ವಸತಿ ಕಾಲೇಜು ಮೀರಾಗಂಜ, ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಕಾಲೇಜು ಕಪಲಾಪುರ, ಉನ್ನತೀಕರಿಸಿದ ಮೊರಾರ್ಜಿ ದೇಸಾಯಿ ವಸತಿ ಕಾಲೇಜು ಬಂಬಳಗಿ ಹಾಗೂ ಉನ್ನತೀಕರಿಸಿದ ಮೌಲಾನಾ ಆಜಾದ ಮಾದರಿ ಪದವಿ ಪೂರ್ವ ಕಾಲೇಜು ಮನಿಯಾರತಾಲಿಂ ಸದರಿ ಕಾಲೇಜುಗಳಲ್ಲಿ 2025-26ನೇ ಸಾಲಿನ ಪ್ರಥಮ ಪಿ.ಯು.ಸಿ (ವಿಜ್ಞಾನ ಮತ್ತು ವಾಣಿಜ್ಯ ವಿಭಾಗ)ಕ್ಕೆ ಉಚಿತ ಪ್ರವೇಶಕ್ಕಾಗಿ ಆಫ್‌ಲೈನ್ ಅರ್ಜಿಗಳನ್ನು ಅಹ್ವಾನಿಸಲಾಗಿದೆ ಎಂದು ಬೀದರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶೇ.75ರಷ್ಟು ಸೀಟುಗಳನ್ನು ಅಲ್ಪಸಂಖ್ಯಾತ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್) ವಿದ್ಯಾರ್ಥಿಗಳಿಗೆ ಹಾಗೂ ಶೇ.25ರಷ್ಟು ಸೀಟುಗಳನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಳಿಗೆ ಮತ್ತು ಇತರೆ ಹಿಂದುಳಿದ ವರ್ಗದವರಿಗೆ ಮೀಸಲಿಡಲಾಗಿದೆ. ಪ್ರವೇಶಾತಿ ಕೋರಿ ಅರ್ಜಿ ಸಲ್ಲಿಸಬಯಸುವವರು ವೆಬ್‌ಸೈಟ್ https://sevasindhuservices. karnataka.gov.in/ ಮೂಲಕ ದಿನಾಂಕ: 17-05-2025 ರೊಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ ಭವನ ಬೀದರ ಮತ್ತು ಸಂಬಂಧಪಟ್ಟ ವಸತಿ ಕಾಲೇಜುಗಳ ಪ್ರಾಂಶುಪಾಲರಿಗೆ ಸಂಪರ್ಕಿಸಲು ಅವರು ತಿಳಿಸಿದ್ದಾರೆ.
*****
*****