ಕೃಷಿ ಸಚಿವ ಚೆಲುವರಾಯ ಸ್ವಾಮಿ ಅವರಿಂದ ಡಾ. ಕುಳೂರು ಕನ್ಯಾನ ಸದಾಶಿವ ಶೆಟ್ಟಿ ದತ್ತಿ ನೀಧಿ ಪ್ರದಾನ
ಬೀದರ್ : ಇಲ್ಲಿನ ಕನ್ನಡಪ್ರಭ ಸಹಾಯಕ ವರದಿಗಾರ ಹಾಗೂ ಪತ್ರಕರ್ತ ಮೌಲಾನಾಸಾಬ್ (ಹಾಜಿ ಪಾಶಾ) ಅವರಿಗೆ ಕೆರಳದ ಕಾಸರಗೋಡಿನಲ್ಲಿ ಮೇ 3 ರಂದು ನಡೆದ ಸಮಾರಂಭದಲ್ಲಿ ಡಾ. ಕುಳೂರು ಕನ್ಯಾನ ಸದಾಶಿವ ಶೆಟ್ಟಿ ದತ್ತಿ ನೀಧಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರ್ಕಾರ, ಕರ್ನಾಟಕ ಪ್ರವಾಸೋದ್ಯ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ಕಾಸರಗೋಡಿನ ಸೀತಾಂಗೋಳಿಯ ಅಲಯನ್ಸ ಕನ್ವೇನಷನ್ ಸೆಂಟರ್ನಲ್ಲಿ ಮೇ 3 ರಂದು ಕರ್ನಾಟಕ ರಾಜ್ಯದ ಕೃಷಿ ಸಚಿವ ಎನ್ ಚೆಲುವರಾಯ ಸ್ವಾಮಿ ಅವರು ಪ್ರಶಸ್ತಿ ಪತ್ರ, ಫಲಕ ,ಶಾಲು ಹಾಗೂ ನಗದು ಪ್ರದಾನ ಮಾಡಿದರು.

ಈ ಸಮಾರಂಭದಲ್ಲಿ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದಂಗಳವರು ಶ್ರೀಮದ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ರಾಜ್ಯದ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಕೆರಳದ ಮಂಜೇಶ್ವರ ಕ್ಷೇತ್ರದ ಶಾಸಕರಾದ ಎ.ಕೆ.ಎಂ ಅಶ್ರಫ್, ಪ್ರಸಿದ್ದ ಉದ್ಯಮಿ ಡಾ. ಸದಾಶಿವ ಶೆಟ್ಟಿ ಕುಳೂರು ಕನ್ಯಾನ್, ಸ್ವಾಗತ ಸಮಿತಿ ಅಧ್ಯಕ್ಷರಾದ ಕೆಕೆ ಶೆಟ್ಟಿ ಕುತ್ತಿಕ್ಕಾರು, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಸಂಜೀವಕುಮಾರ ಅತಿವಾಳೆ, ಶಿವರೆಡ್ಡಿ ಖ್ಯಾಡೆದ್, ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ರವಿ ನಾಯ್ಕಾಪು, ಕಾಸರಗೋಡು ಕೆಯುಡಬ್ಲ್ಯುಜೆ ಅಧ್ಯಕ್ಷರಾದ ಎ. ಆರ್ ಸುಬ್ಬಯ್ಯ ಕಟ್ಟೆ, ಸೇರಿದಂತೆ ಇನ್ನಿತರ ಪ್ರಮುಖರು ಹಾಜರಿದ್ದರು. ಈ ಸಂದರ್ಭದಲ್ಲಿ ಮೌಲಾನಾಸಾಬ್ ಸೇರಿದಂತೆ ಒಟ್ಟು 21 ವಿವಿಧ ಪತ್ರಕರ್ತರಿಗೆ ದತ್ತಿ ನಿಧಿ ಪ್ರದಾನ ಮಾಡಲಾಯಿತು.
ಇದೆ ಸಂದರ್ಭದಲ್ಲಿ ಪತ್ರಕರ್ತರಿಗೆ ಪಿಂಚಣಿ ಯೋಜನೆಗೆ ಚಾಲನೆ ನೀಡಿ ಅಲ್ಲಿನ 3 ಜನರಿಗೆ ಪ್ರತಿ ತಿಂಗಳು 3 ಸಾವಿರ ರು. ಪಿಂಚಣಿಯ ವ್ಯವಸ್ಥೆ ಕಲ್ಪಿಸಲಾಗಿದೆ. ಇದೇ ಸಂದರ್ಭದಲ್ಲಿ ಕಾಸರಗೋಡು ಜಿಲ್ಲಾ ಪತ್ರಕರ್ತರಿಗೆ ಸಂಘದ ಗುರುತಿನ ಚೀಟಿ ವಿತರಣೆ ಹಾಗೂ ಗಡಿನಾಡ ಸಾಧಕರಿಗೆ ಸನ್ಮಾನ ಕೂಡ ನಡೆಯಿತು.
ಇದೆ ಸಂದರ್ಭದಲ್ಲಿ ಪತ್ರಕರ್ತರಿಗೆ ಪಿಂಚಣಿ ಯೋಜನೆಗೆ ಚಾಲನೆ ನೀಡಿ ಅಲ್ಲಿನ 3 ಜನರಿಗೆ ಪ್ರತಿ ತಿಂಗಳು 3 ಸಾವಿರ ರು. ಪಿಂಚಣಿಯ ವ್ಯವಸ್ಥೆ ಕಲ್ಪಿಸಲಾಗಿದೆ. ಇದೇ ಸಂದರ್ಭದಲ್ಲಿ ಕಾಸರಗೋಡು ಜಿಲ್ಲಾ ಪತ್ರಕರ್ತರಿಗೆ ಸಂಘದ ಗುರುತಿನ ಚೀಟಿ ವಿತರಣೆ ಹಾಗೂ ಗಡಿನಾಡ ಸಾಧಕರಿಗೆ ಸನ್ಮಾನ ಕೂಡ ನಡೆಯಿತು.

ಕಾರ್ಯಕ್ರಮಕ್ಕೂ ಮುನ್ನ ವಿವಿಧ ಕಲಾವಿದರಿಂದ ಶೋಭಾಯಾತ್ರೆ ಜರುಗಿದ್ದು ಎಲ್ಲ ಅತಿಥಿಗಳಿಗೆ ಮೆರವಣಿಗೆಯ ಮೂಲಕ ಕಾರ್ಯಕ್ರಮದ ಸ್ಥಳಕ್ಕೆ ಕರೆತರಲಾಯಿತು. ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
—
—