ಮೇ.10 ರಂದು ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತ್ಯುತ್ಸವ ಕಾರ್ಯಕ್ರಮ
ಬೀದರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೀದರ ಇವರ ಸಂಯುಕ್ತಾಶ್ರಯದಲ್ಲಿ ಮೇ.10 ರಂದು ಬೆಳಿಗ್ಗೆ 11 ಗಂಟೆಗೆ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಸಮುದಾಯ ಭವನ ಅಮಲಾಪೂರ ರಸ್ತೆ ಬೀದರದಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತ್ಯುತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ ಬಈದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಮಾಡಲಿದ್ದಾರೆ. ಅಧ್ಯಕ್ಷತೆ ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೀದರ ಲೋಕಸಭಾ ಸದಸ್ಯರಾದ ಸಾಗರ ಈಶ್ವರ ಖಂಡ್ರೆ, ಔರಾದ (ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ್, ಬಸವಕಲ್ಯಾಣ ಶಾಶಕರಾದ ಶರಣು ಸಲಗರ, ಬೀದರ ದಕ್ಷಿಣ ಶಾಸಕರಾದ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಹುಮನಾಬಾದ ಶಾಸಕರಾದ ಡಾ.ಸಿದ್ಧಲಿಂಗಪ್ಪ ಎನ್.ಪಾಟೀಲ ಹಾಗೂ ವಿಧಾನ ಪರಿಷತ್ ಶಾಸಕರುಗಳಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ ಜಿ.ನಮೋಶಿ, ಭೀಮರಾವ ಬಿ.ಪಾಟೀಲ, ಡಾ.ಎಂ.ಜಿ.ಮೂಳೆ ಹಾಗೂ ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಾಲಾ ನಾರಾಯಣರಾವ, ಬೀದರ ನಗರಸಭೆ ಅಧ್ಯಕ್ಷರಾದ ಮಹಮ್ಮದ್ ಗೌಸ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸವನ್ನು ಬೀದರ ಅಕ್ಕಮಹಾದೇವಿ ಮಹಾವಿದ್ಯಾಲಯದ ರಸಾಯನ ಶಾಸ್ತç ವಿಭಾಗದ ಹಿರಿಯ ಉಪನ್ಯಾಸಕರಾದ ಶಿವಶರಣಪ್ಪಾ ಹುಗ್ಗಿ ಪಾಟೀಲ ಅವರು ನೀಡಲಿದ್ದಾರೆ.