ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಎನ್‍ಎಸ್‍ಎಸ್ ಶಿಬಿರಕ್ಕೆ ಚಾಲನೆ
ಸ್ವಯಂ ಸೇವಕರು ದೇಶಕ್ಕೆ ಕೊಡುಗೆ ನೀಡಲಿ
ಸ್ವಯಂ ಸೇವಕರು ದೇಶಕ್ಕೆ ಕೊಡುಗೆ ನೀಡಲಿ
ಬೀದರ್: ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ಸಮಾಜ ಹಾಗೂ ದೇಶಕ್ಕೆ ಕೊಡುಗೆ ನೀಡಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಸಹ ಪ್ರಾಧ್ಯಾಪಕ ಅಶೋಕ ರೆಡ್ಡಿ ಹೇಳಿದರು.
ನಗರದ ಓಡವಾಡದಲ್ಲಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವತಿಯಿಂದ ಹಮ್ಮಿಕೊಳ್ಳಲಾದ ಏಳು ದಿನಗಳ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.
ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಸಮಯ ಪ್ರಜ್ಞೆ, ಸಂಯಮ ಮೈಗೂಡಿಸಿಕೊಳ್ಳಬೇಕು. ಶಿಕ್ಷಣದ ಜತೆಗೆ ಸಾಮಾಜಿಕ ಕಾರ್ಯಗಳಲ್ಲೂ ಪಾಲ್ಗೊಳ್ಳಬೇಕು ಎಂದು ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರೊ. ಮನೋಜಕುಮಾರ ಕಿವಿಮಾತು ಹೇಳಿದರು.
ಪ್ರೊ. ಶ್ರೀಕಾಂತ ಪಾಟೀಲ ರಾಷ್ಟ್ರೀಯ ಸೇವಾ ಯೋಜನೆ ಉದ್ದೇಶಗಳನ್ನು ವಿವರಿಸಿದರು.
ಪ್ರೊ. ಶ್ರೀಕಾಂತ ಪಾಟೀಲ ರಾಷ್ಟ್ರೀಯ ಸೇವಾ ಯೋಜನೆ ಉದ್ದೇಶಗಳನ್ನು ವಿವರಿಸಿದರು.
ಎನ್‍ಎಸ್‍ಎಸ್ ಘಟಕ 1 ರ ಕಾರ್ಯಕ್ರಮ ಅಧಿಕಾರಿ ಶ್ರೀನಿವಾಸ್ ರೆಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಎನ್‍ಎಸ್‍ಎಸ್ ಘಟಕ 2 ರ ಕಾರ್ಯಕ್ರಮ ಅಧಿಕಾರಿ ಡಾ. ವಿದ್ಯಾ ಪಾಟೀಲ ಸ್ವಾಗತಿಸಿದರು. ಅಂಜಲಿ ನಿರೂಪಿಸಿದರು. ಅಶ್ವಿನಿ ವಂದಿಸಿದರು.