ಹೇಮರೆಡ್ಡಿ ಮಲ್ಲಮ್ಮನ ಬದುಕು ಮನುಕುಲಕ್ಕೆ ಆದರ್ಶ-ಸಚಿವ ರಹೀಮ್ ಖಾನ್
ಬೀದರ್ : 14ನೇ ಶತಮಾನದ ಶಿವಶರಣರಲ್ಲಿ ಪ್ರಜ್ವಲಿಸಿದ ಹೇಮರೆಡ್ಡಿ ಮಲ್ಲಮ್ಮ ದೈವಭಕ್ತಿ, ಕಾಯಕ ನಿಷ್ಠೆ, ದಾನ ಧರ್ಮದಿಂದ, ಆದರ್ಶ ಗೃಹಿಣಿಯಾಗುವ ಮೂಲಕ ಲೋಕ ಪ್ರಸಿದ್ಧಿ ಪಡೆದಿದ್ದರು. ಶ್ರೀಶೈಲ ಮಲ್ಲಿಕಾರ್ಜುನನ್ನು ಸಾಕ್ಷಾತ್ಕರಿಸಿಕೊಂಡ ಹೇಮರೆಡ್ಡಿ ಮಲ್ಲಮ್ಮನ ಬದುಕು ಎಂದಿಗೂ ಅನುಕರಣೀಯ ಹಾಗೂ ಮನುಕುಲಕ್ಕೆ ಆದರ್ಶ ಎಂದು ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್ ಅವರು ಹೇಳಿದರು.
ಅವರು ಶನಿವಾರದಂದು ನಗರದ ಹೇಮರೆಡ್ಡಿ ಮಲ್ಲಮ್ಮ ಸಮುದಾಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೀದರ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಹಾತ್ಮರು ಕೇವಲ ಒಂದು ಜಾತಿಗೆ ಸೀಮಿತರಾಗಬಾರದು. ಹೇಮರೆಡ್ಡಿ ಮಲ್ಲಮ್ಮರ ಆದರ್ಶಗಳನ್ನು ತಾವೆಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಈ ಮೂಲಕ ಸನ್ಮಾರ್ಗದಲ್ಲಿ ಸಾಗಬೇಕು ಎಂದರು.

ಬೀದರ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೆಂದ್ರ ಕೆ. ಬೆಲ್ದಾಳೆ ಅವರು ಮಾತನಾಡಿ, ಹೇಮರೆಡ್ಡಿ ಮಲ್ಲಮ್ಮ ಅವರ ಪರಮ ಶಿವಭಕ್ತೆ. ತಮ್ಮ ಸಮಾಜದವರದ್ದು ಬೇಡುವ ಕೈಯಾಗಬಾರದು ಕೊಡುವ ಕೈಯಾಗಬೇಕು ಎನ್ನುವುದು ಮಲ್ಲಮ್ಮನವರ ಆಸೆಯಾಗಿತ್ತು ಅದರಂತೆ ರೆಡ್ಡಿ ಸಮಾಜ ಈಗ ಬಲಿಷ್ಠ ಸಮಾಜವಾಗಿದೆ. ಸಮಾಜದವರ ಮನವೀಯಂತೆ ಸಮುದಾಯ ಭವನಕ್ಕಾಗಿ 15 ಲಕ್ಷ ಅನುಧಾನ ನೀಡಿದ್ದೇನೆ. ಪೋಷಕರು ತಮ್ಮ ಮಕ್ಕಳಿಗೆ ಮೊಬೈಲ್‌ನಿಂದ ದೂರವಿಡಬೇಕು, ಅವರ ಮೇಲೆ ನಿಗಾವಹಿಸಬೇಕು ಹಾಗೂ ಇತ್ತೀಚಿಗೆ ಅಪಘಾತ ಪ್ರಮಾಣ ಹೆಚ್ಚಾಗುತ್ತಿದ್ದೂ ಥ್ರಿಬಲ್ ರೈಡ್ ಬೈಕ್ ಸವಾರಿಗೆ ಅವಕಾಶ ನೀಡಬಾರದು ಎಂದರು.
ಹಿರಿಯ ಉಪನ್ಯಾಸಕ ಶಿವಶರಣಪ್ಪಾ ಹುಗ್ಗಿ ಪಾಟೀಲ್ ಹೇಮರೆಡ್ಡಿ ಮಲ್ಲಮ್ಮ ಜೀವನ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ, ಸರ್ಕಾರಿ ಸೇವೆಗೆ ಆಯ್ಕೆಯಾದ, ಮುಂಬಡ್ತಿ, ನಿವೃತ್ತರಾದ ಹಾಗೂ ಎಂ.ಬಿ.ಬಿ.ಎಸ್ ಪದವಿ ಪಡೆದವರಿಗೆ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ರಾಜು ಚಿಂತಾಮಣಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ್ ಶಿಂಧೆ, ಎನ್.ವಿ.ಗುರೂಜಿ, ರೆಡ್ಡಿ ಸಮಾಜದ ಜಿಲ್ಲಾಧ್ಯಕ್ಷ ಶಂಕರರೆಡ್ಡಿ ಚಿಟ್ಟಾ, ನಿವೃತ್ತ ಎಡಿಸಿ ಬಾಬುರೆಡ್ಡಿ ಸಂಗ್ರಾಮ ರೆಡ್ಡಿ, ಗೋಪಾಲ್ ರೆಡ್ಡಿ, ರವಿ ರೆಡ್ಡಿ, ಚಂದ್ರಶೇಖರ ರೆಡ್ಡಿ, ಶ್ರೀನಿವಾಸ್ ರೆಡ್ಡಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.
—————-