ಪರಿಷತ್ ಸಂಸ್ಥಾಪನಾ ದಿನ, ಬುದ್ಧ, ಬಸವ, ಅಂಬೇಡ್ಕರ್ ಜಯಂತಿ ಆಚರಣೆ
ಕನ್ನಡ ಸಾಹಿತ್ಯ ಪರಿಷತ್ ಕನ್ನಡದ ಅಸ್ಮಿತೆ
ಕನ್ನಡ ಸಾಹಿತ್ಯ ಪರಿಷತ್ ಕನ್ನಡದ ಅಸ್ಮಿತೆ
ಬೀದರ್: ಕನ್ನಡ ಸಾಹಿತ್ಯ ಪರಿಷತ್ ಕನ್ನಡ ನಾಡು ಹಾಗೂ ನುಡಿಯ ಅಸ್ಮಿತೆಯಾಗಿದೆ ಎಂದು ಭಾರತೀಯ ಬಸವ ಬಳಗದ ರಾಜ್ಯ ಅಧ್ಯಕ್ಷ ಬಾಬುವಾಲಿ ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ವತಿಯಿಂದ ನಗರದ ಬಸವ ಕೇಂದ್ರದಲ್ಲಿ ಈಚೆಗೆ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪನಾ ದಿನ, ಬುದ್ಧ, ಬಸವ ಹಾಗೂ ಅಂಬೇಡ್ಕರ್ ಜಯಂತಿ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪರಿಷತ್ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕøತಿ, ನೆಲ, ಜಲದ ಸಮೃದ್ಧಿಗೆ ಶ್ರಮಿಸುತ್ತಿರುವ ಸಂಸ್ಥೆಯಾಗಿದೆ ಎಂದು ಬಣ್ಣಿಸಿದರು.
ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಮಾತನಾಡಿ, ಪರಿಷತ್ ಸಂಶೋಧನೆ, ಪ್ರಕಟಣೆ, ಸಮ್ಮೇಳನ, ಸಮಾವೇಶ, ವಿಚಾರ ಸಂಕಿರಣಗಳ ಮೂಲಕ ರಾಜ್ಯದಲ್ಲಿ ನುಡಿ ಸಂವರ್ಧನೆಗೆ ಟೊಂಕ ಕಟ್ಟಿ ನಿಂತಿದೆ. ರಾಜ್ಯದಲ್ಲಿ ಪರಿಷತ್ ಅಜೀವ ಸದಸ್ಯರ ಸಂಖ್ಯೆ 4 ಲಕ್ಷ ದಾಟಿದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಮಾತನಾಡಿ, ಪರಿಷತ್ ಸಂಶೋಧನೆ, ಪ್ರಕಟಣೆ, ಸಮ್ಮೇಳನ, ಸಮಾವೇಶ, ವಿಚಾರ ಸಂಕಿರಣಗಳ ಮೂಲಕ ರಾಜ್ಯದಲ್ಲಿ ನುಡಿ ಸಂವರ್ಧನೆಗೆ ಟೊಂಕ ಕಟ್ಟಿ ನಿಂತಿದೆ. ರಾಜ್ಯದಲ್ಲಿ ಪರಿಷತ್ ಅಜೀವ ಸದಸ್ಯರ ಸಂಖ್ಯೆ 4 ಲಕ್ಷ ದಾಟಿದೆ ಎಂದು ಹೇಳಿದರು.

ಪರಿಷತ್ ರಾಜ್ಯ ಅಧ್ಯಕ್ಷ ಡಾ. ಮಹೇಶ ಜೋಶಿ ಅವರು ಪರಿಷತ್ ಅನ್ನು ಜನಸಾಮಾನ್ಯರ ಪರಿಷತ್ ಆಗಿಸಲು ಹಾಗೂ ಸದಸ್ಯರ ಸಂಖ್ಯೆ ಹೆಚ್ಚಿಸಲು ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು.
ಈಚೆಗೆ ಮಂಡ್ಯ ಸಮ್ಮೇಳನದಲ್ಲಿ ಆದ ಕೆಲ ಗೊಂದಲ, ಚುನಾಯಿತ ಅಧ್ಯಕ್ಷರ ನಿಧನ, ರಾಜೀನಾಮೆ, ಅನರ್ಹತೆ ಸಂದರ್ಭದಲ್ಲಿ ಆ ಹುದ್ದೆಗಳನ್ನು ತುಂಬಲು ಯಾರಿಗೆ ಅಧಿಕಾರ ನೀಡಬೇಕು ಎಂಬ ವಿಷಯಗಳನ್ನು ನಿಬಂಧನೆಗಳಲ್ಲಿ ಸೇರಿಸುವ ಉದ್ದೇಶದಿಂದ ಬೈಲಾ ತಿದ್ದುಪಡಿಗೆ ಮುಂದಾಗಿದ್ದು, ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚಿಸಿಯೇ ಅದನ್ನು ವಿಶೇಷ ಸಾಮಾನ್ಯ ಸಭೆಗೆ ಒಯ್ಯಲಾಗುತ್ತಿದೆ. ಕೆಲವರು ಇದನ್ನೇ ಸರ್ವಾಧಿಕಾರಿ ಧೋರಣೆ ಎಂದು ಬಿಂಬಿಸುತ್ತಿರುವುದು ಸರಿಯಲ್ಲ ಎಂದು ತಿಳಿಸಿದರು.
ಕೆಲವರು ಉದ್ದೇಶಪೂರ್ವಕವಾಗಿ ಮಹೇಶ ಜೋಶಿ ಅವರನ್ನು ವಿರೋಧಿಸುತ್ತಿದ್ದಾರೆ. ಜೋಶಿ ಅವರು ಪರಿಷತ್ ಜಿಲ್ಲಾ ಘಟಕಗಳ ಅಭಿಪ್ರಾಯ ಕ್ರೊಢೀಕರಿಸಿಯೇ ನಿರ್ಣಯ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು.
ಬೆಲ್ದಾಳ ಸಿದ್ಧರಾಮ ಶರಣರು ಸಾನಿಧ್ಯ ವಹಿಸಿದ್ದರು. ಬಸವ ಕೇಂದ್ರದ ಜಿಲ್ಲಾ ಘಟಕದ ಅಧ್ಯಕ್ಷ ಶರಣಪ್ಪ ಮಿಠಾರೆ, ಕಲಬುರಗಿ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಸಿದ್ದಪ್ಪ ಮೂಲಗೆ, ಕರ್ನಾಟಕ ಲೇಖಕಿಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಭಾರತಿ ವಸ್ತ್ರದ್, ಬಸವ ಜಯಂತಿ ಉತ್ಸವ ಸಮಿತಿಯ ಅಧ್ಯಕ್ಷ ಜೈರಾಜ ಖಂಡ್ರೆ, ನಿವೃತ್ತ ಪ್ರಾಚಾರ್ಯ ಶಿವಶರಣಪ್ಪ ಹುಗ್ಗಿ ಪಾಟೀಲ, ಮಹಿಳಾ ಬಸವ ಕೇಂದ್ರದ ಲಿಂಗಾರತಿ ನಾವದಗೇರೆ ಉಪಸ್ಥಿತರಿದ್ದರು. ಬಾಬುರಾವ್ ದಾನಿ ಸ್ವಾಗತಿಸಿದರು. ಧರ್ಮವೀರ ಬಿರಾದಾರ ನಿರೂಪಿಸಿದರು. ಸಿದ್ಧಾರೂಢ ಭಾಲ್ಕೆ ವಂದಿಸಿದರು.