ಕುರಿ, ಮೇಕೆ ಸಾಕಾಣಿಕೆ ತರಬೇತಿ: ಹೆಸರು ನೋಂದಾಯಿಸಲು ಮನವಿ
ಬೀದರ್ – ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡಾ ರಸ್ತೆ, ಬೀದರನಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ದಿನಾಂಕ: 15-05-2025 ರಿಂದ 16-05-2025 ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಬೀದರ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತ ರೈತರುತರಬೇತಿಗೆ ಹಾಜರಾಗುವ ಸಮಯದಲ್ಲಿ ಆಧಾರಕಾರ್ಡ್ ಪ್ರತಿ ಹಾಗೂ ಇತ್ತೀಚಿನ ಎರಡು ಭಾವಚಿತ್ರ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸತಕ್ಕದ್ದು, ಆಸಕ್ತರು ಮುಂಚಿತವಾಗಿ ವಾಟ್ಸ್ಪ್ ಮೂಲಕ ತಮ್ಮ ಹೆಸರು ಮತ್ತು ಮೊಬೈಲ ಸಂಖ್ಯೆಯೊಂದಿಗೆ ನೋಂದಾಯಿಸಿಕೊಂಡು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9902561957 ಗೆ ಸಂಪರ್ಕಿಸಲು ಅವರು ತಿಳಿಸಿದ್ದಾರೆ.