ದತ್ತಿ ಪ್ರಶಸ್ತಿ ಪುರಸ್ಕೃತ ಹಾಜಿ ಪಾಶಾಗೆ ಸನ್ಮಾನ
ಬೀದರ್; ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಡಾ. ಕುಳೂರು ಕನ್ಯಾನ ಸದಾಶಿವ ಶೆಟ್ಟಿ ದತ್ತಿ ನಿಧಿ ಪ್ರಶಸ್ತಿಗೆ ಭಾಜನರಾಗಿರುವ ಹಿರಿಯ ಪತ್ರಕರ್ತ ಮೌಲಾನಾ ಸಾಬ್ (ಹಾಜಿ ಪಾಶಾ) ಅವರನ್ನು ನಗರದಲ್ಲಿ ಬುಧವಾರ ಪತ್ರಕರ್ತರ ಬಳಗದಿಂದ ಸನ್ಮಾನಿಸಲಾಯಿತು.
ನಗರದ ಗೋಪಿ ಸ್ಟೂಡಿಯೋದಲ್ಲಿ ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ವಿಜಯಕುಮಾರ ಸೋನಾರೆ ಅವರ ನೇತೃತ್ವದಲ್ಲಿ ಅಭಿನಂದಿಸಲಾಯಿತು. ಹಿಂದಿ ಮತ್ತು ಕನ್ನಡ ದಿನ ಪತ್ರಿಕೆಯಲ್ಲಿ ಕಳೆದ 30 ವರ್ಷಗಳಿಂದ ಸುದೀರ್ಘವಾಗಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಕಾಸರಗೋಡಿನಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಈ ಹಿನ್ನಲೆ ಸನ್ಮಾನಿಸಿ ಅಭಿನಂದಿಸಲಾಯಿತು.
ಹಿರಿಯ ಛಾಯಾಗ್ರಾಹಕರಾದ ಗೋಪಿಚಂದ್ ತಾಂದಳೆ, ಹಿರಿಯ ಪತ್ರಕರ್ತರಾದ ಶಶಿಕಾಂತ ಬಂಬುಳಗೆ, ಎಂ.ಪಿ ಮುದಾಳೆ, ಸುನೀಲ ಭಾವಿಕಟ್ಟಿ, ದೇವರಾಜ್, ಸಂತೋಷ, ಚಂದ್ರಕಾಂತ ಹಳ್ಳಿಖೇಡಕರ್ ಮತ್ತು ರಾಜಕುಮಾರ ಮಚಕೂರಿ ಮತ್ತಿತರರಿದ್ದರು.
————