ಗೊಂಡ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ
ಬೀದರ್: ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘವು ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಾಧನೆಗೈದ ಜಿಲ್ಲೆಯ ಗೊಂಡ(ಕುರುಬ) ಸಮುದಾಯದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿದೆ.
ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 80ಕ್ಕೂ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳು ಮೇ 31 ರ ಒಳಗೆ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ ಜೋಳದಾಪಕೆ ತಿಳಿಸಿದ್ದಾರೆ.
ಗೊಂಡ(ಕುರುಬ) ಸಮುದಾಯದ ಅರ್ಹ ವಿದ್ಯಾರ್ಥಿಗಳು ದೃಢೀಕೃತ ಅಂಕಪಟ್ಟಿ, ಜಾತಿ ಪ್ರಮಾಣಪತ್ರ ಹಾಗೂ ಇತ್ತೀಚಿನ ಪಾಸ್‍ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ನಗರದ ಬಿ.ವಿ.ಬಿ. ಕಾಲೇಜು ರಸ್ತೆಯಲ್ಲಿ ಇರುವ ಎಕ್ಸಿಸ್ ಬ್ಯಾಂಕ್ ಕೆಳಗಡೆಯ ಆದರ್ಶ ಐಟಿಐನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದಾರೆ.
ಹೆಸರು ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗೆ ಕಾಲೇಜಿನ ಕಿರಿಯ ತರಬೇತಿ ಅಧಿಕಾರಿಗಳಾದ ಎಂ.ಪಿ. ವೈಜಿನಾಥ (9008263376) ಅಥವಾ ವಿಜಯಕುಮಾರ ಬ್ಯಾಲಹಳ್ಳಿ (8970189141) ಅವರನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
————————–