Friday, May 23, 2025
HomePopularಬೀದರ್ : ಮೇ. 21 ರಂದು ಲೋಕಾಯುಕ್ತ ಅಹವಾಲು ಸಭೆ

ಬೀದರ್ : ಮೇ. 21 ರಂದು ಲೋಕಾಯುಕ್ತ ಅಹವಾಲು ಸಭೆ

ಬೀದರ್ : ಮೇ. 21 ರಂದು ಲೋಕಾಯುಕ್ತ ಅಹವಾಲು ಸಭೆ
ಬೀದರ್ : ಕರ್ನಾಟಕ ಲೋಕಾಯುಕ್ತ ಬೀದರ ಪೊಲೀಸ್ ಠಾಣೆ ವತಿಯಿಂದ ಭಾಲ್ಕಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಮೇ.21 ರಂದು ಬೆಳಿಗ್ಗೆ 11 ಗಂಟೆಗೆ ಸಾರ್ವಜನಿಕ ಕುಂದುಕೊರತೆ/ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಬೀದರನ ಪೊಲೀಸ್ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ನೇರವಾಗಿ ಬಂದು ಸಲ್ಲಿಸಲು ಹಾಗೂ ಸ್ಥಳದಲ್ಲಿಯೇ ಇದ್ದ ಅಧಿಕಾರಿಗಳೊಂದಿಗೆ ಕೆಲಸ ನೆರವೇರಿಸಿಕೊಳ್ಳಲು ಅಥವಾ ಸ್ಥಳದಲ್ಲಿಯೇ ದೂರು ಅರ್ಜಿಯ ಫಾರಂ ನಂ: 1 ಮತ್ತು 2 ತೆಗೆದುಕೊಂಡು ದೂರು ನೀಡಲು ಅನುಕೂಲ ಕಲ್ಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಎಸ್‌ಪಿ ಮೊಬೈಲ್ : 9364062519, ಡಿಎಸ್‌ಪಿ ಮೊಬೈಲ್ : 9364062571, ಪಿಐ-1 ಮೊಬೈಲ್ : 9364062672, ಪಿಐ-2 ಮೊಬೈಲ್ : 9364062673, ಪಿಐ-3 ಮೊಬೈಲ್ : 9364062674, ಪಿಐ-4 ಮೊಬೈಲ್ : 9364062675 ಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
——————-
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

Nagem Uddin on Smartwatch Series 3
Md Rana Ahmad on Smartwatch Series 3