Friday, May 23, 2025
HomePopularಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ ವಹಿಸಿ - ಸಚಿವ ಈಶ್ವರ ಬಿ.ಖಂಡ್ರೆ

ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ ವಹಿಸಿ – ಸಚಿವ ಈಶ್ವರ ಬಿ.ಖಂಡ್ರೆ

ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ ವಹಿಸಿ-ಸಚಿವ ಈಶ್ವರ ಬಿ.ಖಂಡ್ರೆ
ಬೀದರ್ : ಜಿಲ್ಲೆಯ ಜನರಿಗೆ ಯಾವುದೇ ರೀತಿಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಅರಣ್ಯ, ಜೈವಿಕ ಹಾಗೂ ಪರಿಸರ ಮತ್ತು ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ. ಬಿ. ಖಂಡ್ರೆ ಸೂಚನೆ ನೀಡಿದರು.
ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಮಳೆ ಹಾನಿಯ ಕುರಿತು ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.
ಕೆಲವೊಂದು ಬಾರಿ ವಿದ್ಯುತ್ ಟ್ರಿಪ್ ಆಗುತ್ತಿರುವುದರಿಂದ ಕುಡಿಯುವ ನೀರಿಗೆ ಸಮಸ್ಯೆಯಾಗುತ್ತಿರುವ ಬಗ್ಗೆ ಗಮನಕ್ಕೆ ಬಂದಿದು ಕೂಡಲೇ ವಿದ್ಯುತ್ ಸಮಸ್ಯೆಯನ್ನು ಬಗೆಹರಿಸಬೇಕು. ಟೆಂಡರ್ ಇಲ್ಲದೇ ಕಾಮಗಾರಿ ಕೈಗೊಳ್ಳುತ್ತಿರುವ ಕುರುತು ಮಾಧ್ಯಮಗಳಲ್ಲಿ ವರದಿಯಾಗುತ್ತಿವೆ ಇದನ್ನು ಗಂಭೀರವಾಗಿ ಪರಿಗಣಿಸಿ ಟೆಂಡರ್ ಇಲ್ಲದೇ ಯಾರಿಗೂ ಕಾಮಗಾರಿ ಕೈಗೊಳ್ಳಲು ಅವಕಾಶ ನೀಡಬಾರದು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮಳೆ ಹಾನಿಯ ಕುರಿತು ಸಂಪೂರ್ಣ ಮಾಹಿತಿ ಕಲೆ ಹಾಕಿ ನಿಯಮದಡಿ ಪರಿಹಾರಕ್ಕೆ ಕ್ರಮವಹಿಸಬೇಕು. ನಗರದಲ್ಲಿ ಚರಂಡಿಗಳು ತುಂಬಿ ತುಳುಕುತ್ತಿರುವುದು ಕಂಡು ಬರುತ್ತಿದೆ ಒಂದು ವಾರದೊಳಗೆ ಚರಂಡಿ ಸ್ವಚ್ಛತೆಗೆ ಕ್ರಮವಹಿಸಬೇಕು ಇಲ್ಲದಿದ್ದರೆ ಸಬಂಧಪಟ್ಟವರ ವಿರುದ್ಧ ಕ್ರಮವಹಿಸಲಾಗುವುದು ಎಂದು ಅಧಿಕಾರಿಗಳಿಗೆ ಸಚಿವರು ಎಚ್ಚರಿಕೆ ನೀಡಿದರು.
ಈ ಸಭೆಯಲ್ಲಿ ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಂ ಖಾನ್, ನಗರಸಭೆ ಅಧ್ಯಕ್ಷ ಮೊಹ್ಮದ್ ಗೌಸ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ,ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ, ಅಪರ ಜಿಲ್ಲಾಧಿಕಾರಿ ಶಿವಕುಮಾರ್ ಶೀಲವಂತ ಸೇರಿದಂತೆ ಇತರರು ಉಪಸ್ಥಿತರಿದ್ದರು.
******
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

Nagem Uddin on Smartwatch Series 3
Md Rana Ahmad on Smartwatch Series 3