Friday, May 23, 2025
HomePopularಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸುವರ್ಣ ಮಹೋತ್ಸವ: ಸಚಿವ ಈಶ್ವರ ಖಂಡ್ರೆ ಹೇಳಿಕೆ ಆತ್ಮವಿಶ್ವಾಸದಿಂದ ಎಲ್ಲವೂ...

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸುವರ್ಣ ಮಹೋತ್ಸವ: ಸಚಿವ ಈಶ್ವರ ಖಂಡ್ರೆ ಹೇಳಿಕೆ ಆತ್ಮವಿಶ್ವಾಸದಿಂದ ಎಲ್ಲವೂ ಸಾಧ್ಯ

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸುವರ್ಣ ಮಹೋತ್ಸವ: ಸಚಿವ ಈಶ್ವರ ಖಂಡ್ರೆ ಹೇಳಿಕೆ
ಆತ್ಮವಿಶ್ವಾಸದಿಂದ ಎಲ್ಲವೂ ಸಾಧ್ಯಬೀದರ್: ಆತ್ಮವಿಶ್ವಾಸದಿಂದ ಅಂದುಕೊಂಡ ಎಲ್ಲವನ್ನೂ ಸಾಧಿಸಲು ಸಾಧ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈಚೆಗೆ ನಡೆದ ಸುವರ್ಣ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬೀದರ್ ವಿದ್ಯಾರ್ಥಿಗಳು ಯಾರಿಗಿಂತಲೂ ಕಡಿಮೆ ಇಲ್ಲ. ಅನೇಕರು ವಿಜ್ಞಾನಿಗಳಾಗಿದ್ದಾರೆ. ದೇಶ, ವಿದೇಶದಲ್ಲಿ ಉನ್ನತ ಹುದ್ದೆಗಳಲ್ಲಿದ್ದಾರೆ ಎಂದು ತಿಳಿಸಿದರು.
50 ವರ್ಷ ಪೂರೈಸಿರುವ ಕಾಲೇಜು ಸಾವಿರಾರು ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸಿದೆ ಎಂದು ತಿಳಿಸಿದರು.
ಸರ್ಕಾರಿ ಕಾಲೇಜುಗಳಲ್ಲಿ ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣ ಕೊಡಲಾಗುತ್ತಿದೆ. ಬಡ ಹಾಗೂ ಮಾಧ್ಯಮ ವರ್ಗದ ವಿದ್ಯಾರ್ಥಿಗಳು ಸರ್ಕಾರಿ ಕಾಲೇಜುಗಳ ಪ್ರಯೋಜನ ಪಡೆಯಬೇಕು ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಹೇಳಿದರು.
1974 ರಲ್ಲಿ ಪ್ರಾರಂಭವಾದ ಕಾಲೇಜು ಯಶಸ್ವಿಯಾಗಿ 50 ವರ್ಷ ಪೂರೈಸಿದೆ. ಜಿಲ್ಲೆಯ ಶೈಕ್ಷಣಿಕ ಪ್ರಗತಿ ತನ್ನದೇ ಆದ ಕೊಡುಗೆ ನೀಡಿದೆ ಎಂದು ಪ್ರಾಚಾರ್ಯೆ ಡಾ. ಜೈಶ್ರೀ ಪ್ರಭಾ ತಿಳಿಸಿದರು.
ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿಗಳು ಸ್ನಾತಕ ಹಾಗೂ ಸ್ನಾತಕೋತ್ತರ ಶಿಕ್ಷಣ ಪೂರ್ಣಗೊಳಿಸಿದ್ದಾರೆ ಎಂದು ತಿಳಿಸಿದರು.
ಬೀದರ್ ದಕ್ಷಿಣ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ, ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ, ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಬಿಡಿಎ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಅಬ್ದುಲ್ ಖದೀರ್, ಕಾಲೇಜಿನ ಸಿಬ್ಬಂದಿ ಕಾರ್ಯದರ್ಶಿ ಡಾ. ರಾಜಕುಮಾರ, ಸಾಂಸ್ಕøತಿಕ ಕಾರ್ಯದರ್ಶಿ ಡಾ. ಎಲಿಷಾ ದೇವಿದಾಸ, ಡಾ. ಮಹಾದೇವಿ ಹೆಬ್ಬಾಳೆ, ಡಾ. ಜೈಭಾರತ ಮಂಗೇಶ್ಕರ್, ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಇದ್ದರು. ಪಾಲಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

Nagem Uddin on Smartwatch Series 3
Md Rana Ahmad on Smartwatch Series 3