ಬಸವಗೀರಿಯಲ್ಲಿ ಮೇ.23, 24 ರಂದು ಅಕ್ಕ ಅನ್ನಪೂರ್ಣ ತಾಯಿ ಸ್ಮರಣೋತ್ಸವ
ಬೀದರ್: ಲಿಂಗಾಯತ ಮಹಾಮಠದ ವತಿಯಿಂದ ನಗರದ ಬಸವಗಿರಿಯಲ್ಲಿ ಮೇ 23 ಮತ್ತು 24 ರಂದು ಅಕ್ಕ ಅನ್ನಪೂರ್ಣ ತಾಯಿ ಪ್ರಥಮ ಸ್ಮರಣೋತ್ಸವ ಜರುಗಲಿದೆ.
ಬೆಳಿಗ್ಗೆ 7.30ಕ್ಕೆ ಬಸವಕಲ್ಯಾಣದ ಜಗದ್ಗುರು ಸಿದ್ಧರಾಮ ಸ್ವಾಮೀಜಿ ಸಾನಿಧ್ಯದಲ್ಲಿ ಸಾಮೂಹಿಕ ವಚನ ಪಾರಾಯಣ ಹಾಗೂ ಅನುಭಾವ ಗೋಷ್ಠಿ ನಡೆಯಲಿದೆ. ಬಸವಕಲ್ಯಾಣದ ಅನುಭವ ಮಂಟಪದ ಸಂಚಾಲಕ ಶಿವಾನಂದ ಸ್ವಾಮೀಜಿ, ಭಾಲ್ಕಿಯ ಮಹಾಲಿಂಗ ಸ್ವಾಮೀಜಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಭಾಲ್ಕಿಯ ಬಸವಲಿಂಗ ಸ್ವಾಮೀಜಿ, ಸಿದ್ರಾಮಪ್ಪ ಕಪಲಾಪುರ ಸಮ್ಮುಖ, ಪರುಷಕಟ್ಟೆಯ ಚನ್ನಬಸವಣ್ಣ ಅಧ್ಯಕ್ಷತೆ ವಹಿಸುವರು. ಧಾರವಾಡದ ಬಸವರಾಜ ಹಡಪದ ಷಟ್‍ಸ್ಥಲ ಧ್ವಜಾರೋಹಣ ಮಾಡುವರು.
ಸಂಜೆ 5ಕ್ಕೆ ಜಗದ್ಗುರು ಚನ್ನಬಸವಾನಂದ ಸ್ವಾಮೀಜಿ ಸ್ಮರಣೋತ್ಸವವನ್ನು ಉದ್ಘಾಟಿಸುವರು.
ಬಸವಕಲ್ಯಾಣದ ಬಸವಪ್ರಭು ಸ್ವಾಮೀಜಿ ಅನುಭಾವ ಮಂಡಿಸುವರು. ಭಾತಂಬ್ರಾದ ಜಗದ್ಗುರು ಶಿವಯೋಗೀಶ್ವರ ಸ್ವಾಮೀಜಿ ಸಾನಿಧ್ಯ, ಧಾರವಾಡದ ಡಾ. ಬಸವಾನಂದ ಸ್ವಾಮೀಜಿ, ಬೇಲೂರಿನ ಪಂಚಾಕ್ಷರಿ ಸ್ವಾಮೀಜಿ, ಸಿಂಧನಕೇರಾದ ಹೊನ್ನಲಿಂಗ ಸ್ವಾಮೀಜಿ ಸಮ್ಮುಖ, ಬಸವ ಜಯಂತಿ ಉತ್ಸವ ಸಮಿತಿಯ ಅಧ್ಯಕ್ಷ ಜೈರಾಜ ಖಂಡ್ರೆ ಅಧ್ಯಕ್ಷತೆ ವಹಿಸುವರು. ಬಳ್ಳಾರಿಯ ಶಿವಪ್ರಕಾಶ ಅಂಗಡಿ ವಿಶೇಷ ಆಮಂತ್ರಿತರಾಗಿ ಪಾಲ್ಗೊಳ್ಳುವರು.
24 ರಂದು ಬೆಳಿಗ್ಗೆ 8.30ಕ್ಕೆ ಪಾಪನಾಶ ಗೇಟ್‍ನಿಂದ ಬಸವಗಿರಿ ವರೆಗೆ ವಚನ ವಿಜಯೋತ್ಸವ ಪಥ ಸಂಚಲನ ನಡೆಯಲಿದೆ. ಬೆಳಿಗ್ಗೆ 11ಕ್ಕೆ ಅಕ್ಕ ಅನ್ನಪೂರ್ಣ ತಾಯಿ ಸ್ಮರಣೋತ್ಸವ ನಡೆಯಲಿದೆ.

ಕೂಡಲಸಂಗಮದ ಬಸವ ಧರ್ಮ ಪೀಠಾಧ್ಯಕ್ಷೆ ಮಾತೆ ಡಾ. ಗಂಗಾದೇವಿ ‘ಅನ್ನಪೂರ್ಣ’ ಯೋಜನೆಗೆ ಚಾಲನೆ ನೀಡುವರು. ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದ್ದೇವರು ಸಾನಿಧ್ಯ, ಲಿಂಗಾಯತ ಮಹಾಮಠದ ಪ್ರಭುದೇವ ಸ್ವಾಮೀಜಿ ನೇತೃತ್ವ, ಆಳಂದದ ಕೋರಣೇಶ್ವರ ಸ್ವಾಮೀಜಿ ಸಮ್ಮುಖ, ನೀಲಮ್ಮನ ಬಳಗದ ನೀಲಮ್ಮ ರೂಗನ್ ಅಧ್ಯಕ್ಷತೆ ವಹಿಸುವರು.
ವಿಜಯಪುರದ ಡಾ. ಜೆ.ಎಸ್. ಪಾಟೀಲ ಮುಖ್ಯ ಅನುಭಾವ ಮಂಡಿಸುವರು. ಹೈಕೋರ್ಟ್ ನ್ಯಾಯವಾದಿ ಸಂತೋಷ್ ಎಸ್, ನಾಗರಾಳೆ ಮುಖ್ಯ ಅತಿಥಿಯಾಗಿ, ಖೇಳಗಿಯ ಶಿವಲಿಂಗ ಸ್ವಾಮೀಜಿ, ಕಲಬುರಗಿಯ ಮಾತೆ ಪ್ರಭುಶ್ರೀ, ನಿಡವಂಚಾದ ಮಾತೆ ಮೈತ್ರಾದೇವಿ ವಿಶೇಷ ಆಮಂತ್ರಿತರಾಗಿ ಭಾಗವಹಿಸುವರು.
ಸಂಜೆ 4.30ಕ್ಕೆ ವಿಶೇಷ ಅನುಭಾವ ಹಾಗೂ ಸಮಾರೋಪ ಸಮಾರಂಭ ಜರುಗಲಿದೆ. ಹುಲಸೂರಿನ ಡಾ. ಶಿವಾನಂದ ಸ್ವಾಮೀಜಿ, ಭಾಲ್ಕಿಯ ಗುರುಬಸವ ಪಟ್ಟದ್ದೇವರು ಸಾನಿಧ್ಯ, ಗುರಮಠಕಲ್‍ನ ಶಾಂತವೀರ ಗುರು ಮುರುಘರಾಜೇಂದ್ರ ಸ್ವಾಮೀಜಿ, ಬೇಲೂರಿನ ಶಿವಕುಮಾರ ಸ್ವಾಮೀಜಿ ಸಮ್ಮುಖ, ಕಲಬುರಗಿ ಜಿ.ಪಂ. ಮುಖ್ಯ ಯೋಜನಾಧಿಕಾರಿ ಶರಣಬಸವ ಮಠಪತಿ ಅಧ್ಯಕ್ಷತೆ ವಹಿಸುವರು. ವಿಶ್ರಾಂತ ಜಿಲ್ಲಾ ನ್ಯಾಯಾಧೀಶ ಸುಭಾಷಚಂದ್ರ ನಾಗರಾಳೆ ಮುಖ್ಯ ಅತಿಥಿ, ಠಾಣಾಕುಶನೂರಿನ ಸಿದ್ಧಲಿಂಗ ಸ್ವಾಮೀಜಿ, ಸಾಯಗಾಂವ್‍ನ ಶಿವಾನಂದ ಸ್ವಾಮೀಜಿ, ಹುಡಗಿಯ ಚನ್ನಮಲ್ಲದೇವರು ವಿಶೇಷ ಆಮಂತ್ರಿತರಾಗಿ ಪಾಲ್ಗೊಳ್ಳುವರು ಎಂದು ಲಿಂಗಾಯತ ಮಹಾ ಮಠದ ಪ್ರಕಟಣೆ ತಿಳಿಸಿದೆ.