ಹುಮನಾಬಾದ : ಐಟಿಐ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
ಬೀದರ್ : ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹುಮನಾಬಾದನಲ್ಲಿ ಅಗಸ್ಟ್-2025 ನೇ ಶೈಕ್ಷಣಿಕ ಸಾಲಿನ ಮೇರಿಟ್-ಕಂ-ರಿಸರ್ವೇಶನ್ ಆಧಾರಿತ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾಗಿರುವ 14 ವರ್ಷ ಮೇಲ್ಪಟ್ಟ ವಯೋಮಿತಿಯ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಹುಮನಾಬಾದ ಸಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತ ಅಭ್ಯರ್ಥಿಗಳು ಇಲಾಖೆಯ ವೆಬ್‍ಸೆಟ್ www.cite.karnataka.gov.in ಮೂಲಕ ದಿನಾಂಕ: 28-05-2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ 9449041472, 9448100294, 7483148185 ಹಾಗೂ 9448150536 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
*****