ಬೀದರ್ : ಮೇ. 24 ರಂದು ಬಸವ ಜಯಂತ್ಯುತ್ಸವ
ಬೀದರ್: ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಜಿಲ್ಲಾ ಘಟಕದ ವತಿಯಿಂದ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಮೇ 24 ರಂದು ಬೆಳಿಗ್ಗೆ 11.30ಕ್ಕೆ ಬಸವ ಜಯಂತ್ಯುತ್ಸವ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸುವರು. ಬಸವ ಸೇವಾ ಪ್ರತಿಷ್ಠಾನದ ಡಾ. ಗಂಗಾಂಬಿಕೆ ಅಕ್ಕ ಸಾನಿಧ್ಯ, ಹರಳಯ್ಯ ಸಮಾಜದ ಪ್ರಧಾನ ಕಾರ್ಯದರ್ಶಿ ರಾಜಕುಮಾರ ಟಿಳೆಕರ್ ಹಲಬರ್ಗಾ ಅಧ್ಯಕ್ಷತೆ ವಹಿಸುವರು. ಕಲಬುರಗಿಯ ಸಾಹಿತಿ ಡಾ. ಕಾವ್ಯಶ್ರೀ ಮಹಾಗಾಂವಕರ್ ವಿಶೇಷ ಉಪನ್ಯಾಸ ನೀಡುವರು.
ಮುಖ್ಯ ಅತಿಥಿಗಳಾಗಿ ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್, ಸಂಸದ ಸಾಗರ್ ಖಂಡ್ರೆ, ಅತಿಥಿಗಳಾಗಿ ಬಿಡಿಎ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಅಬ್ದುಲ್ ಖದೀರ್, ಗುರುನಾನಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಬಲಬೀರಸಿಂಗ್, ಬಸವ ಕೇಂದ್ರದ ಜಿಲ್ಲಾ ಘಟಕದ ಅಧ್ಯಕ್ಷ ಶರಣಪ್ಪ ಮಿಠಾರೆ, ಮರಾಠ ಸಮಾಜದ ಮುಖಂಡ ಅಶೋಕ ಸೋನಜಿ, ಲಿಂಗಾಯತ ಸಮಾಜ ಯುವ ಒಕ್ಕೂಟದ ರಾಜ್ಯ ಅಧ್ಯಕ್ಷ ಆನಂದ ದೇವಪ್ಪ, ಪ್ರಮುಖರಾದ ಅನಿಲಕುಮಾರ ಬೆಲ್ದಾರ್, ರಮೇಶ ಡಾಕುಳಗಿ, ಗಂಧರ್ವ ಸೇನಾ, ಡಾ. ದೇವಿದಾಸ ತುಮಕುಂಟೆ, ಬಾಬುರಾವ್ ಪಾಸ್ವಾನ್, ದಿಗಂಬರ್ ಮಡಿವಾಳ, ಒಕ್ಕೂಟದ ಗೌರವಾಧ್ಯಕ್ಷ ಬಸವರಾಜ ಮಾಳಗೆ, ಉಪಾಧ್ಯಕ್ಷ ತಾನಾಜಿ ಸಗರ್, ಪ್ರಧಾನ ಕಾರ್ಯದರ್ಶಿ ಜಗನ್ನಾಥ ಅಲಗೊಲ್ ಪಾಲ್ಗೊಳ್ಳುವರು ಎಂದು ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಡಾ. ರಾಜಶೇಖರ ಸೇಡಂಕರ್ ತಿಳಿಸಿದ್ದಾರೆ.