ಸರ್ಕಾರದಿಂದ ಸಿದ್ಧರಾಮೇಶ್ವರ ಜಯಂತಿ ಆಚರಿಸಿ
ಬೀದರ್: ರಾಜ್ಯ ಸರ್ಕಾರದ ವತಿಯಿಂದ ಜಿಡಗಾ-ಮುಗಳಖೋಡ ಮಠದ ಸಿದ್ಧರಾಮೇಶ್ವರ ಸ್ವಾಮೀಜಿ ಅವರ ಜಯಂತಿ ಆಚರಿಸಬೇಕು ಎಂದು ಕಾಂಗ್ರೆಸ್‍ನ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿ ಜಾನಸನ್ ಘೋಡೆ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಈ ಕುರಿತು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಸಿದ್ಧರಾಮೇಶ್ವರ ಸ್ವಾಮೀಜಿ ರಾಜ್ಯ ಹಾಗೂ ದೇಶದ ವಿವಿಧೆಡೆ ಪ್ರಖ್ಯಾತಿ ಹೊಂದಿದ್ದಾರೆ. ಅವರಿಗೆ ಲಕ್ಷಾಂತರ ಭಕ್ತರಿದ್ದಾರೆ. ಜಿಡಗಾ-ಮುಗಳಖೋಡ ಮಠ ಐತಿಹಾಸಿಕ ಮಠವಾಗಿದೆ ಎಂದು ಗಮನ ಸೆಳೆದರು.
ಸೆಪ್ಟೆಂಬರ್ 18 ರಂದು ಸರ್ಕಾರದ ವತಿಯಿಂದಲೇ ಅವರ ಜಯಂತಿ ಆಚರಿಸಲು ಆದೇಶ ಹೊರಡಿಸಬೇಕು ಎಂದು ಕೋರಿದರು.