ಮೇ. 27 ರಂದು ಪೌರಾಡಳಿತ ಸಚಿವ ರಹೀಂ ಖಾನ್ ಅವರ ಬೀದರ ಜಿಲ್ಲಾ ಪ್ರವಾಸ
ಬೀದರ್ – ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್ ಅವರು ಮೇ.27 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ.
ಅಂದು ಬೆಳಿಗ್ಗೆ 10 ಗಂಟೆಗೆ ಬೀದರ ಉತ್ತರ ಕ್ಷೇತ್ರದ ಚಾಂಬೋಲ್ ಗ್ರಾಮದಲ್ಲಿ ಕೃಷಿ ಬೀಜ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಿಗ್ಗೆ 1.30ಕ್ಕೆ ಬೀದರ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡುವರು. ಬೆಳಿಗ್ಗೆ 11ಕ್ಕೆ ಬೀದರ ಜಿಲ್ಲೆಯ ಇಂದೀರಾ ಕ್ಯಾಂಟೀನ್/ಘನತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11.30ಕ್ಕೆ ಬೀದರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದ ಬೀದರ ಜಿಲ್ಲಾ ಆಡಳಿತ ಭವನದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 2 ಗಮಟೆಗೆ ಬೀದರ ಜಿಲ್ಲೆಯ ಅಮೃತ್ 2.0 ಯೋಜನೆಯಡಿ ಕೈಗೆತ್ತಿಕೊಂಡಿರುವ ಉದ್ಯಾನವನ ಹಾಗೂ ಕೆರೆಗಳ ಪರಿಶೀಲನೆ ನಡೆಸಲಿದ್ದಾರೆ. ನಂತರ ಸಂಜೆ 4 ರಿಂದ ಬೀದರ ಜಿಲ್ಲೆಯಲ್ಲಿ ನಿಗಧಿಪಡಿಸಿದ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
