ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ: ಸಂಜಪ್ಪ ಮಾನೂರೆ ಹೇಳಿಕೆ
ಎನ್‍ಎಸ್‍ಎಸ್ ಶಿಬಿರದಿಂದ ವ್ಯಕ್ತಿತ್ವ ವಿಕಸನ
ಎನ್‍ಎಸ್‍ಎಸ್ ಶಿಬಿರದಿಂದ ವ್ಯಕ್ತಿತ್ವ ವಿಕಸನ
ಬೀದರ್: ರಾಷ್ಟ್ರೀಯ ಸೇವಾ ಯೋಜನೆ ಶಿಬಿರಗಳಲ್ಲಿ ಪಾಲ್ಗೊಳ್ಳುವುದರಿಂದ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಶಿಕ್ಷಣ ಸಂಯೋಜಕ ಸಂಜಪ್ಪ ಮಾನೂರೆ ಹೇಳಿದರು.
ನಗರದ ಹಳ್ಳದಕೇರಿಯ ಪೋಚಮ್ಮ ಮಂದಿರದಲ್ಲಿ ಭಾನುವಾರ ನಡೆದ ಓಂ ಸಿದ್ಧಿ ವಿನಾಯಕ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಯುವಜನರು ಸ್ವಾಮಿ ವಿವೇಕಾನಂದರ ತತ್ವಗಳನ್ನು ಅಳವಡಿಸಿಕೊಳ್ಳಬೇಕು. ಸಮಾಜಕ್ಕೆ ಕೈಲಾದ ಕೊಡುಗೆ ನೀಡಬೇಕು ಎಂದು ತಿಳಿಸಿದರು.
ಉದ್ಘಾಟನೆ ನೆರವೇರಿಸಿದ ಮನ್ನಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ. ಧನರಾಜ ಬಿರಾದಾರ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯು ರಾಷ್ಟ್ರೀಯ ಭಾವೈಕ್ಯತೆ ಬೆಳೆಸುತ್ತದೆ. ಸದೃಢ ರಾಷ್ಟ್ರ ಕಟ್ಟಲು ನೆರವಾಗುತ್ತದೆ ಎಂದು ಹೇಳಿದರು.

ಯೋಜನೆ ಸಮಾಜ ಸೇವೆಗೆ ಪ್ರೇರಣೆ ನೀಡುತ್ತದೆ. ಜೀವನ ಕೌಶಲವನ್ನೂ ಕಲಿಸುತ್ತದೆ ಎಂದು ತಿಳಿಸಿದರು.
ಮನ್ನಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಪ್ರಾಧ್ಯಾಪಕ ದಶವಂತ ಬಂಡೆ, ಗಣಕ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಪೃಥ್ವಿರಾಜ ಹಾಲಪ್ಪಗೋಳ್ ಮಾತನಾಡಿದರು. ಕಾಲೇಜಿನ ಪ್ರಾಚಾರ್ಯ ಪ್ರೊ. ಸಿದ್ರಾಮ ಬಿಚಕುಂದೆ ಅಧ್ಯಕ್ಷತೆ ವಹಿಸಿದ್ದರು.
ಸಂಸ್ಥೆಯ ಕಾರ್ಯದರ್ಶಿ ವಿಜಯಕುಮಾರ ಚಟ್ಟಿ, ಕಾರ್ಯಕ್ರಮ ಅಧಿಕಾರಿ ಡಾ. ನಿತೇಶಕುಮಾರ ಬಿರಾದಾರ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಈಶ್ವರಿ, ಸೋನಾಬಾಯಿ ಪ್ರಾರ್ಥನೆ ಗೀತೆ ಹಾಡಿದರು. ಅಜಯ್ ಸ್ವಾಗತಿಸಿದರು. ರೋಹಿತ್ ವಂದಿಸಿದರು.
ಶಿಬಿರದ ಅಂಗವಾಗಿ ಮಂದಿರದ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು
