ಇಂಜಿನಿಯರ್ಸಗಳ ಪರಿಷತ್‍ಗೆ ನೇಮಕ: ಸನ್ಮಾನ
ಬೀದರ್: ರಾಜ್ಯ ಸರ್ಕಾರದ ಕರ್ನಾಟಕ ವೃತ್ತಿಪರ ಸಿವಿಲ್ ಎಂಜಿನಿಯರ್‍ಗಳ ಪರಿಷತ್ ಸದಸ್ಯರಾಗಿ ನೇಮಕಗೊಂಡ ಹಿರಿಯ ಸಿವಿಲ್ ಎಂಜಿನಿಯರ್ ಹಾವಶೆಟ್ಟಿ ಪಾಟೀಲ್ ಅವರನ್ನು ನಾಟ್ಯಶ್ರೀ ನೃತ್ಯಾಲಯ ಹಾಗೂ ಗೆಳೆಯರ ಬಳಗದ ವತಿಯಿಂದ ನಗರದಲ್ಲಿ ಮಂಗಳವಾರ
ಶಾಲು ಹೊದಿಸಿ, ಮೈಸೂರು ಪೇಟ ತೊಡಿಸಿ, ಸನ್ಮಾನಿಸಿ, ಗೌರವಿಸಲಾಯಿತು.
ಜಿಲ್ಲೆಯ ಸಿವಿಲ್ ಎಂಜಿನಿಯರಿಂಗ್ ಕ್ಷೇತ್ರಕ್ಕೆ ಹಾವಶೆಟ್ಟಿ ಪಾಟೀಲ ಅವರ ಕೊಡುಗೆ ಅಪಾರವಾಗಿದೆ. ಅವರನ್ನು ಪರಿಷತ್ ಸದಸ್ಯರಾಗಿ ನೇಮಕ ಮಾಡಿರುವ ಸರ್ಕಾರದ ಕ್ರಮ ಸೂಕ್ತವಾಗಿದೆ ಎಂದು ನೃತ್ಯಾಲಯದ ನಿರ್ದೇಶಕ ಕೆ. ಸತ್ಯಮೂರ್ತಿ ಹೇಳಿದರು.
ಹಿರಿಯ ಪತ್ರಕರ್ತ ಸದಾನಂದ ಜೋಶಿ ಮಾತನಾಡಿ, ಹಾವಶೆಟ್ಟಿ ಪಾಟೀಲ ಅವರು ಮೂರು ದಶಕಗಳಿಂದ ಸಿವಿಲ್ ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರಿಗೆ ಪರಿಷತ್ ಸದಸ್ಯ ಸ್ಥಾನ ಒಲಿದು ಬಂದಿರುವುದು ಸಂತಸ ಉಂಟು ಮಾಡಿದೆ ಎಂದು ತಿಳಿಸಿದರು.
ನಾಟ್ಯಶ್ರೀ ನೃತ್ಯಾಲಯದ ಅಧ್ಯಕ್ಷೆ ರಾಣಿ ಸತ್ಯಮೂರ್ತಿ, ಜಿಲ್ಲಾ ಬ್ರಾಹ್ಮಣ ಮಹಾ ಸಂಘದ ಅಧ್ಯಕ್ಷ ರಮೇಶ ಕುಲಕರ್ಣಿ, ಪ್ರಮುಖರಾದ ಓಂಪ್ರಕಾಶ ದಡ್ಡೆ, ಉಮಾಕಾಂತ ಮೀಸೆ, ಸಂತೋಷಕುಮಾರ ಮಂಗಳೂರೆ, ಕಿರಣ ಮೂರ್ತಿ, ರವಿಚಂದ್ರ ಮೂರ್ತಿ, ರಾಘವೇಂದ್ರ ಮೂರ್ತಿ ಮತ್ತಿತರರು ಇದ್ದರು.
