ಯಾದಗೀರಿ : ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ನಿರಂತರ ಮಳೆ ಹಿನ್ನೆಲೆ ಭೀಮಾನದಿಯ ಒಳಹರಿವು ಅಪಾರ ಪ್ರಮಾಣದಲ್ಲಿ ಹೆಚ್ಚಾಗಿದೆ. ಹೀಗಾಗಿ ಯಾದಗಿರಿ ವಡಗೇರಾ ತಾಲೂಕಿನ ಗುರುಸಣಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿಂದ ಐದು ಸಾವಿರ ಕ್ಯೂಸೆಕ್ ನೀರನ್ನ ಭೀಮಾನದಿಗೆ ಹರಿಬೀಡಲಾಗಿದೆ. ಇದರಿಂದ ಭೀಮಾನದಿ ಅಪಾಯಮಟ್ಟ ಮೀರಿ ಹರಿಯುತ್ತಿದೆ. ಅಪಾಯದ ಮಟ್ಟವನ್ನ ಮೀರಿ ಹರಿಯುತ್ತಿರುವ ನದಿಯಲ್ಲಿ ಮೀನುಗಾರರು ಹುಚ್ಚಾಟ ಮೆರೆಯುತ್ತಿದ್ದಾರೆ.
ಈಗಾಗಲೇ ಜಿಲ್ಲಾಡಳಿತ ಭೀಮಾನದಿ ನೀರಿನ ಮಟ್ಟ ಹೆಚ್ಚಾಗುವ ಸಾಧ್ಯತೆಯಿದೆ. ನದಿ ತೀರದತ್ತ ಜನಜಾನುವಾರು ತೆರಳದಂತೆ ಖಡಕ್ ಸೂಚನೆ ಕೊಟ್ಟಿದೆ. ಆದರೆ ಜಿಲ್ಲಾಡಳಿತದ ಆದೇಶಕ್ಕೂ ಕಿವಿಗೊಡದೆ ನದಿಯಲ್ಲಿ ಮೀನುಗಾರರು ಹುಚ್ಚಾಟ ಪ್ರದರ್ಶನ ಮಾಡ್ತಿದ್ದಾರೆ.

ಹೀಗಾಗಿ ನದಿಯಲ್ಲಿ ಯಾವುದೇ ಅನಾಹುತ ಸಂಭವಿಸುವ ಮೊದಲೇ ಪೊಲೀಸ್ ಬಂದೋಬಸ್ತ್ ನಿಯೋಜಿಸುವಂತೆ ಆಗ್ರಹಿಸಿದ್ದಾರೆ. ಈಗಾಗಲೇ ಮೀನು ಹಿಡಿಯಲು ಹೋಗಿ ಇಬ್ಬರು ಯುವಕರು ನೀರು ಪಾಲಾಗಿ ಮೃತಪಟ್ಟಿದ್ದಾರೆ. ಇಂತಹ ಘಟನೆ ಮರುಕಳಿಸುವ ಮುನ್ನ ಪೊಲೀಸ್ ಅಥವಾ ಹೋಮ್ ಗಾರ್ಡ್ ಸಿಬ್ಬಂದಿ ನಿಯೋಜನೆ ಮಾಡುವಂತೆ ಸಾಮಾಜಿಕ ಹೋರಾಟಗಾರ ಉಮೇಶ್ ಮುದ್ನಾಳ್ ಒತ್ತಾಯಿಸಿದ್ದಾರೆ.
