Sunday, July 13, 2025
HomePopularಬೀದರ ರೈಲ್ವೆ ನಿಲ್ದಾಣದ ಪುನರಾಭಿವೃದ್ಧಿ ಕಾಮಗಾರಿ ಪರಿಶೀಲನೆ ಮಾಡಿದ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ...

ಬೀದರ ರೈಲ್ವೆ ನಿಲ್ದಾಣದ ಪುನರಾಭಿವೃದ್ಧಿ ಕಾಮಗಾರಿ ಪರಿಶೀಲನೆ ಮಾಡಿದ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ

ಬೀದರ ರೈಲ್ವೆ ನಿಲ್ದಾಣದ ಪುನರಾಭಿವೃದ್ಧಿ ಕಾಮಗಾರಿ ಪರಿಶೀಲನೆ ಮಾಡಿದ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ
ಬೀದರ್ : ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಶನಿವಾರ ಬೀದರ ರೈಲ್ವೆ ನಿಲ್ದಾಣದಲ್ಲಿ ನಡೆಯುತ್ತಿರುವ ಪುನರಾಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.
ಅಮೃತ ಭಾರತ ನಿಲ್ದಾಣ ಯೋಜನೆಯಡಿ 24.35 ಕೋಟಿ ರೂಪಾಯಿ ವೆಚ್ಚದಲ್ಲಿ ಬೀದರ ರೈಲ್ವೆ ನಿಲ್ದಾಣದ ಪುನಾರಾಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ, ಶೀಘ್ರವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು ಹಾಗೂ ನಿಲ್ದಾಣದಲ್ಲಿ ನಡೆಯುತ್ತಿರುವ 12 ಮೀಟರ ಅಗಲದ ಪಾದಚಾರಿ ಮೇಲ್ಸೇತುವೆ, ಲಿಫ್ಟ್, ಎಸ್ಕಲೇಟರಗಳು, ಬುಕ್ಕಿಂಗ್ ಕೌಂಟರ್, ಪಾರ್ಕಿಂಗ್ ಮತ್ತು ಸುತ್ತಮುತ್ತಲಿನ ಪ್ರದೇಶದ ಕಾಮಗಾರಿ ಪರಿಶೀಲನೆ ಹಾಗೂ ಪ್ರಯಾಣಿಕರ ಲಭ್ಯವಿರುವ ಸೌಲಭ್ಯಗಳು, ಪ್ರಯಾಣಿಕರು ಸುಗಮ ಸಂಚಾರ, ಸುರಕ್ಷಿತೆ ಮತ್ತು ಭದ್ರತೆಗಾಗಿ ಅಧಿಕಾರಿಗಳು ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.

ಈ ಕಾಮಗಾರಿಗಳು ಗಮನಾರ್ಹ ರಚನಾತ್ಮಕ ಬದಲಾವಣೆಗಳನ್ನು ಒಳಗೊಂಡಿರುವುದರಿAದ ಜನಸಂದಣಿ ನಿರ್ವಹಣೆ , ಭದ್ರತಾ ವ್ಯವಸ್ಥೆ, ಈ ಕಾಮಗಾರಿಗಳಿಂದ ಪ್ರಯಾಣಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಇದಕ್ಕೂ ಮೊದಲು ಸಿಕಿಂದರಾಬಾದ ವಿಭಾಗದ ನಾಗಲಪಲ್ಲಿ-ಬೀದರ ವಿಂಡೋ ತ್ರೈಲಿಂಗ್ ತಪಾಸಣೆ ನಡೆಸಿದರು.
ಈ ಸಂದರ್ಭದಲ್ಲಿ ಸಂಸದರಾದ ಸಾಗರ ಈಶ್ವರ ಖಂಡ್ರೆ, ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್, ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಹುಮನಾಬಾದ ಶಾಸಕರಾದ ಡಾ.ಸಿದ್ಧಲಿಂಗಪ್ಪ ಎನ್. ಪಾಟೀಲ್, ಬಸವಕಲ್ಯಾಣ ಶಾಸಕರಾದ ಶರಣು ಸಲಗಾರ, ಮಾಜಿ ಸಚಿವರಾದ ಬಂಡೆಪ್ಪ ಕಾಶಂಪೂರೆ ಸೇರಿದಂತೆ ಸ್ಥಳೀಯ ನಾಯಕರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.
*****
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

Nagem Uddin on Smartwatch Series 3
Md Rana Ahmad on Smartwatch Series 3